UN NEWS NETWORKS
ಉಳ್ಳಾಲ: ಇರಾ ಗ್ರಾಮ ಪಂಚಾಯತ್ 2022-23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಮಲೆಯಾಳಿ ಬಿಲ್ಲವ ಸೇವಾ ಸಂಘ ಇರಾ – ಕಲ್ಲಾಡಿ ಸಭಾಭವನದಲ್ಲಿ ನಡೆಯಿತು.
ಗ್ರಾಮಸಭೆಯ ಅಧ್ಯಕ್ಷತೆಯನ್ನು ಇರಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೇಸ್ ಡಿಸೋಜ ವಹಿಸಿದ್ದರು. ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸುನೀತ ಕುಮಾರಿ ಕಾರ್ಯನಿರ್ವಹಿಸಿದರು.
ಸಭೆಯಲ್ಲಿ ಉಪಾಧ್ಯಕ್ಷ ಮೊಯಿದಿನ್ ಕುಂಞÂ, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಬ್ದುಲ್ ರಝಾಕ್ ಕುಕ್ಕಾಜೆ, ಸದಸ್ಯರಾದ ನಿರ್ಮಲ, ರೇಣುಕಾ, ನಳಿನಾಕ್ಷಿ, ಮಹಮ್ಮದ್, ಚಂದ್ರಪ್ರಭಾ, ಕೆ.ಪ್ರತಾಪ್ ಚಂದ್ರ, ಯಾಕೂಬ್, ಬಾನುರೇಖಾ.ವೈ. ಶೆಟ್ಟಿ, ರಮೇಶ್. ಎಸ್.ಪೂಜಾರಿ,ಅಬ್ದುಲ್ ಹಮೀದ್, ವಾಣಿಶ್ರೀ, ಪುಷ್ಪಲತಾ.ಸಿ.ಕರ್ಕೇರಾ, ಬಂಟ್ವಾಳ ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಸ್ಥಿತರಿದ್ದರು.
ಕೃಷಿ ಇಲಾಖೆ, ಕಂದಾಯ ಇಲಾಖೆ, ಪಶುಸಂಗೋಪನೆ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಸವಿಸ್ತಾರವಾಗಿ ಹೇಳಿದರು.
ಪಂಚಾಯತ್ ಪ್ರಭಾರ ಅಧಿಕಾರಿ ಶ್ರೀಕಾಂತ್ ಸ್ವಾಗತಿಸಿದರು. ಕಾರ್ಯದರ್ಶಿ ದಿನೇಶ್ ಕುಮಾರ್ ವಂದಿಸಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮಸ್ಥರು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.