Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ದೇರಳಕಟ್ಟೆಯಲ್ಲಿ ಯಕ್ಷ ಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ
ಸಮಾಜಮುಖಿ ಜೀವನದಿಂದ ಸಂತೃಪ್ತಿ, ಯಶಸ್ಸು; ಒಡಿಯೂರು ಶ್ರೀ

UllalaVaniBy UllalaVaniMarch 7, 2023Updated:March 7, 2023No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN networks

ಉಳ್ಳಾಲ: ನಮ್ಮ ಜೀವನದಲ್ಲಿ ಇತರರಿಗೆ ಉಪಯೋಗವಾಗುವಂತೆ ನಾವು ಬದುಕಿ ಮಾದರಿಯಾಗಬೇಕು.  ಸಂಪತ್ತನ್ನು ನಾವು ಧರ್ಮಯುಕ್ತವಾಗಿ ಗಳಿಸಬೇಕು, ಧರ್ಮಯುಕ್ತವಾಗಿ  ಉಳಿಕೆ ಮಾಡಿ, ಧರ್ಮಯುಕ್ತ ಬಳಕೆ ಮಾಡಿ ಸಮಾಜಮುಖಿಯಾಗಿದ್ದರೆ ಜೀವನದಲ್ಲಿ ಸಂತೃಪ್ತಿ ಮತ್ತು ಯಶಸ್ಸು ಸಾಧ್ಯ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಹೇಳಿದರು.

ಅವರು ಭಾನುವಾರ ದೇರಳಕಟ್ಟೆಯಲ್ಲಿ ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿದರು.‌


ಪ್ರಾಮಾಣಿಕತೆ ಮತ್ತು ಪಾರದರ್ಶಕ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ.  ಯಕ್ಷಧ್ರುವ ಸೌಹಾರ್ದ ಕೋಆಪರೇಟಿವ್ ಸೊಸೈಟಿಯು ಉತ್ತಮ ಉದ್ದೇಶದಿಂದ ಆರಂಭಗೊಂಡಿದ್ದು, ಸಮಾಜಕ್ಕೆ ಬೆಳಕು ಮೂಡಿಸುವ ಪ್ರಯತ್ನದೊಂದಿಗೆ ಇದರ ಕೀರ್ತಿ ಇಡೀ ಜಗತ್ತಿಗೆ ಪಸರಿಸಲಿ  ಎಂದು ಹೇಳಿದರು.

ಹೇರಂಭಾ ಇಂಡಸ್ಟೀಸ್ ಲಿ.ಮತ್ತು ಕೆಮಿನೋ ಫಾರ್ಮಾಲಿಯ ಅಧ್ಯಕ್ಷ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸೊಸೈಟಿಯನ್ನು ಉದ್ಘಾಟಿಸಿ ಮಾತನಾಡಿ,  ಸಮಾಜದಲ್ಲಿ ಕೆಲವೇ ಜನ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ಸತೀಶ್ ಪಟ್ಲ ಅವರು ದೊಡ್ಡ ಕಲಾವಿದರರಾಗಿದ್ದುಕೊಂಡು ಕಲಾವಿದರ ಸಂಕಷ್ಟಕ್ಕೆ ನೆರವಾಗುವುದರೊಂದಿಗೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಯಕ್ಷಧ್ರುವ ಸೌಹಾರ್ದ ಕೋಆಪರೇಟಿವ್ ಸೊಸೈಟಿಯ ಮೂಲಕ ಮತ್ತಷ್ಟು ಜನಸೇವೆಗೆ ಮುಂದಾಗಿರುವುದು ಶ್ಲಾಘನೀಯವಾಗಿದೆ ಎಂದರು.
  ವೇದಿಕೆಯಲ್ಲಿ ದೇವೆಂದ್ರನಾಗಿ, ರಾಜನಾಗಿ ಮೆರೆಯುವ ಯಕ್ಷಗಾನ ಕಲಾವಿದ ನೈಜ ಬದುಕಿನಲ್ಲಿ ಸಂಕಷ್ಟದಲ್ಲಿದ್ದಾನೆ. ಇಂತಹ ತೊಂದರೆಯಲ್ಲಿರುವ ಕಲಾವಿದರ ನೆರವು ನೀಡಲು ಮುಂದಾದ ವ್ಯಕ್ತಿ ಎಂದರೆ ಸತೀಶ್ ಪಟ್ಲ ಅವರು. ಇಂತಹ ಸಮಾಜಮುಖಿ ವ್ಯಕ್ಯಿತ್ವದ ಜನರನ್ನು ಸದಾ‌ ಬೆಂಬಲಿಸೋಣ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಯು.ಟಿ ಖಾದರ್ ವಹಿಸಿ ಮಾತನಾಡಿ, ಈಗಿನ ಕಾಲದಲ್ಲಿ ಎಲ್ಲವೂ ಇದ್ದರೂ ಜನರಿಗೆ ತಾಳ್ಮೆ ಕಡಿಮೆಯಾಗುತ್ತಿದೆ. ಆದರೆ ಯಕ್ಷಗಾನ ಅಥವಾ ಇತರ ಕಲೆಗಳಲ್ಲಿ ತೊಡಗಿಸಿಕೊಂಡವರು ತಾಳ್ನೆಯ ಜೀವನ‌ ನಡೆಸುತ್ತಿರುವುದನ್ನು ನಾವು ನೋಡಬಹುದು. ಇದೀಗ ಯಕ್ಷಗಾನ ಕಲಾವಿದನೋರ್ವನ ಸಮಾಜಮುಖಿ ಕಾರ್ಯಕ್ಕೆ ಶುಭವಾಗಲಿ ಎಂದರು.
ಭದ್ರತಾ ಕೋಶದ ಉದ್ಘಾಟನೆಯನ್ನು ಪ್ರವರ್ತಕರಾದ  ಐಕಲ ಹರೀಶ್‌ ಶೆಟ್ಟಿ ನೆರವೇರಿಸಿದರು. ಷೇರು ಸರ್ಟೀಫಿಕೇಟ್ ಅನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಡಾ. ಸತೀಶ್ ಭಂಡಾರಿ ಬಿಡುಗಡೆಗೊಳಿಸಿದರು. , ಯಕ್ಷಧ್ರುವ ನಗದು ಪತ್ರವನ್ನು ಬೆಳ್ಮ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಸತ್ತಾರ್, ಸಹಕಾರ ಸಂಘಗಳ ಉಪನಿಬಂಧಕ ಎಸ್. ಎಸ್. ರಮೇಶ್ ಬಿಡುಗಡೆಗೊಳಿಸಿದರು. ಮಾಸಿಕ ಠೇವಣಿ ಖಾತೆ ಪುಸ್ತಕ ಬಿಡುಗಡೆಯನ್ನು ಕಂಫಟ್೯ ಇನ್ ಹೋಟೆಲ್ ಮಾಲಕ ಚಂದ್ರಹಾಸ ಶೆಟ್ಟಿ ನೆರವೇರಿಸಿದರು. ಉಳಿತಾಯ ಖಾತೆ ಪುಸ್ತಕವನ್ನು  ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ ಹಿರಿಯ ವ್ಯವಸ್ಥಾಪಕ ಗುರುಪ್ರಸಾದ್ ಬಂಗೇರ ಬಿಡುಗಡೆಗೊಳಿಸಿದರು. ಎಸ್ ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ ರಾಜಾರಾಮ್ ಭಟ್ ಗಣಕ ಯಂತ್ರ ಉದ್ಘಾಟನೆಯನ್ನು ನೆರವೇರಿಸಿದರು.
ದೈಜಿವಲ್ಡ್ ನ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ,  ಶಶಿಧರ ಶೆಟ್ಟಿ ಬರೋಡಾ, ಸವಣೂರು ಸೀತಾರಾಮ ರೈ, ಸುರೇಶ್ ಭಂಡಾರಿ ಕಡಂದಲೆ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಸುಧಾಕರ ಪೂಂಜ, ಸಂತೋಷ್ ಕುಮಾರ್ ಶೆಟ್ಟಿ,  ಪುರುಷೋತ್ತಮ ಭಂಡಾರಿ, ಗಿರೀಶ್ ಶೆಟ್ಟಿ,  ರವಿಚಂದ್ರ ಶೆಟ್ಟಿ, ಲೋಕೇಶ್ ಪೂಜಾರಿ, ಆರತಿ ಆಳ್ವ, ಪ್ರಭಾರ ಪ್ರಧಾನ ವ್ಯವಸ್ಥಾಪಕಿ ತನುಜಾ, ಜೆ. ಅಡ್ಯಾಂತ್ತಾಯ, ಮೊದಲಾದವರು ಉಪಸ್ಥಿತರಿರುವರು.
ನಿರ್ದೆಶಕರಾದ ಸವಣೂರು ಸೀತರಾಮ ರೈ ಅವರು ಸ್ವಾಗತಿಸಿದರು. ಪುರುಷೋತ್ತಮ ಭಂಡಾರಿ ಅಡ್ಯಾರ್ ನಿರೂಪಿಸಿದರು.

ಸಮಾಜಮುಖಿ ಚಿಂತನೆಯೊಂದಿಗೆ ಈ ರಂಗಕ್ಕೆ ಇಳಿದಿದ್ದೇವೆ. ಯಕ್ಷಗಾನ ಕಲಾವಿದರ ಶ್ರೇಯೋಭಿವೃದ್ಧಿಗಾಗಿ  ಪಟ್ಲ ಫೌಂಡೇಶನ್ ಆರಂಭಿಸಿದ್ದೆವು. ಟ್ರಸ್ಟ್ ಆರ್ಥಿಕ ಶಕ್ತಿಯ ಮುನ್ನಡೆಗಾಗಿ ಹಾಗೂ ಎಲ್ಲಾ ರಂಗದ ಕಲಾವಿದರ  ವಲಯದ  ಅನುಕೂಲದ ಹಿತದೃಷ್ಟಿಯಿಂದ ಈ ಕೋಆಪರೇಟಿವ್ ಸೊಸೈಟಿಯ ಲಾಭಾಂಶವನ್ನು ಹಂಚುವ ಉದ್ದೇಶ ಇಟ್ಟುಕೊಂಡಿದ್ದೇವೆ.
ಪಟ್ಲ ಸತೀಶ್ ಶೆಟ್ಟಿ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಬ್ರಹ್ಮ ಶ್ರೀ ನಾರಾಯಣ ಗುರು ಜನ್ಮ ದಿನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 7, 2026

ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 9ರಂದು “ಅಖಂಡ ಭಾರತ ಸಂಕಲ್ಪ ದಿನ”

August 7, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

‘ವಿಕಸಿತ ಭಾರತ ನಿರ್ಮಾಣಕ್ಕೆ ಯುವಶಕ್ತಿ ಅಗತ್ಯ’- ಮೋದಿ ಯುವ ಪೀಳಿಗೆಗೆ ಕರೆ

By UllalaVaniAugust 8, 20260

ದೆಹಲಿ, ಆ. 08: ನವದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್‌ರೋಚ್ ಜನತಾ ಪಾರ್ಟಿ’ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಕೇಂದ್ರ ಶಿಕ್ಷಣ ಸಚಿವರ…

ಉಡುಪಿ: ಸ್ಕೂಟರಿಗೆ ಕಾರು ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು..!!

August 8, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ದಕ್ಷಿಣ ಕನ್ನಡಕ್ಕೆ ಹೈಕೋರ್ಟ್ ಖಾಯಂ ಪೀಠ ಬೇಕು: ನ್ಯಾಯಕ್ಕಾಗಿ ಇನ್ನೆಷ್ಟು ವರ್ಷ ಕಾಯಬೇಕು?

August 8, 2026
1 2 3 … 2,053 Next
Automatic YouTube Gallery

ಪಿಲಾರು ಬೈಲುಗದ್ದೆಕೆಸರು ಗದ್ದೆಯ ಕ್ರೀಡಾಕೂಟ -2026 ನೇರ ಪ್ರಸಾರ

ಶ್ರೀ ನಾಗಬ್ರಹ್ಮ ಸೇವಾ ಸಮಿತಿ ಪಿಲಾರು-ಲಕ್ಷ್ಮೀಗುಡ್ಡೆ

ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಪಿಲಾರು

ಕಟ್ಟಡ & ಇತರ ನಿರ್ಮಾಣ ಕಾರ್ಮಿಕರ ಸಂಘ ಉಳ್ಳಾಲ, ಪಿಲಾರು ಘಟಕ

ಲಗೋರಿ ಟೀಮ್, ಪಿಲಾರು
ಪಿಲಾರು ಬೈಲುಗದ್ದೆಕೆಸರು ಗದ್ದೆಯ ಕ್ರೀಡಾಕೂಟ -2026 ನೇರ ಪ್ರಸಾರ
Now Playing
ಪಿಲಾರು ಬೈಲುಗದ್ದೆಕೆಸರು ಗದ್ದೆಯ ಕ್ರೀಡಾಕೂಟ -2026 ನೇರ ಪ್ರಸಾರ
ಶ್ರೀ ನಾಗಬ್ರಹ್ಮ ಸೇವಾ ಸಮಿತಿ ಪಿಲಾರು-ಲಕ್ಷ್ಮೀಗುಡ್ಡೆ ಶ್ರೀ ಬಾಲಾಂಜನೇಯ ವ್ಯಾಯಾಮ ...
ಶ್ರೀ ನಾಗಬ್ರಹ್ಮ ಸೇವಾ ಸಮಿತಿ ಪಿಲಾರು-ಲಕ್ಷ್ಮೀಗುಡ್ಡೆ

ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಪಿಲಾರು

ಕಟ್ಟಡ & ಇತರ ನಿರ್ಮಾಣ ಕಾರ್ಮಿಕರ ಸಂಘ ಉಳ್ಳಾಲ, ಪಿಲಾರು ಘಟಕ

ಲಗೋರಿ ಟೀಮ್, ಪಿಲಾರು
||MISSING|| ಮoಜನಾಡಿ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ..!
Now Playing
||MISSING|| ಮoಜನಾಡಿ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ..!
ಮಂಜನಾಡಿಯಲ್ಲಿ ವಾಸವಾಗಿರುವ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ; ತಂದೆಗಾಗಿ ...
ಮಂಜನಾಡಿಯಲ್ಲಿ ವಾಸವಾಗಿರುವ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ; ತಂದೆಗಾಗಿ ಹಂಬಲಿಸುತ್ತಿರುವ ಮಕ್ಕಳು

ಮಾಹಿತಿ ಸಿಕ್ಕಲ್ಲಿ 7795764098, 98440 90985 ಸಂಪರ್ಕಿಸಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version