UN networks
ಉಳ್ಳಾಲ: ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ನಾಮಪತ್ರ ಸಲ್ಲಿಸುವ ಮುನ್ನ ಉಳ್ಳಾಲದ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಗೌರವ ಸಲ್ಲಿಸಿದರು. ಜೊತೆಗೆ ನವಮಂಗಳೂರು ನಿರ್ಮಾಣದ ಹರಿಕಾರ ಉಳ್ಳಾಲದ ಬಂಡಿಕೊಟ್ಯದ ನಿವಾಸಕ್ಕೆ ಭೇಟಿ ಕೊಟ್ಟು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಮುಖಂಡರುಗಳಾದ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್ ಉಚ್ಚಿಲ್, ಕುಂಟಾರು ರವೀಶ್ ತಂತ್ರಿ, ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲಾದವರು ಉಪಸ್ಥಿತರಿದ್ದರು.
