Site icon Ullalavani

ಉಳ್ಳಾಲ ದರ್ಗಾ ವಿಹಾರಕ್ಕೆ ಬಂದ ವ್ಯಕ್ತಿ ಸಮುದ್ರಪಾಲು, ಪುತ್ರನ ರಕ್ಷಣೆ

UN networks

ಉಳ್ಳಾಲ: ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಗಂಜಿಮಠ ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ.
ಖಾಲಿದ್ ಅವರು ತನ್ನ ಪತ್ನಿ,ಮಗ,ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು.ದರ್ಗಾ ಭೇಟಿ‌‌ ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು.ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯು ಖಾಲಿದನ್ನು ನೀರು ಪಾಲಾಗಿಸಿದೆ.ಸ್ಥಳದಲ್ಲಿದ್ದ ಈಜುಗಾರರು ಖಾಲಿದ್ ಅವರ ಮಗನನ್ನು ರಕ್ಷಿಸಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಂಜೆ ವೇಳೆ ಖಾಲಿದ್ ಅವರ ಮೃತದೇಹ ಸಮುದ್ರ ತೀರದಲ್ಲಿ ಸಿಕ್ಕಿದ್ದು ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ರಕ್ಷಣೆಗಿಳಿದವನ ಪಸ್೯ ನಾಪತ್ತೆ !
ಖಾಲಿದ್ ಮುಳುಗುತ್ತಿದ್ದಂತೆ ಕುಟುಂಬಸ್ಥರು ರಕ್ಷಣೆಗಾಗಿ ಬೊಬ್ಬಿರಿದಿದ್ದು, ಈ ವೇಳೆ ಸಮೀಪದಲ್ಲೇ ಇದ್ದ ಕೋಡಿ ನಿವಾಸಿಗಳಾದ
ಜಬ್ಬಾರ್, ಅಶ್ರಫ್, ಇಮ್ತಿಯಾಝ್, ಮಹಮ್ಮದ್ ಎಂಬವರು ಧಾವಿಸಿ ಖಾಲಿದ್ ಅವರ ಪುತ್ರನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಆದರೆ ಖಾಲಿದ್ ಅವರನ್ನು ಸಮುದ್ರ ದೂರಕ್ಕೆ‌ ಎಳೆದಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ನಂತರ ಮೃತದೇಹ ಪತ್ತೆಹಚ್ಚಿದ್ದಾರೆ. ಸಮುದ್ರಕ್ಕೆ ಹಾರುವ ಸಂದರ್ಭ ಜಬ್ಬಾರ್ ಅವರು ಪರಿಚಿತರ ಕೈಯಲ್ಲಿ ತಮ್ಮ ಪಸ್೯, ವಾಚ್ ಎಲ್ಲವನ್ನೂ ನೀಡಿದ್ದರು .ಅವರಂತೆ ಇತರರೂ ನೀಡಿದಾಗ ಯುವಕನ ಕೈಯಲ್ಲಿ ವಸ್ತುಗಳು ತುಂಬಿ ಜಬ್ಬಾರ್ ಅವರ ಪಸ್೯ ಕೆಳಗೆ ಬಿದ್ದಿರುವ ಸಾಧ್ಯತೆಗಳಿವೆ. ಕಳೆದುಹೋದ ಪಸ್೯ನಲ್ಲಿ ದಾಖಲೆಗಳು, ರೂ. 8,000 ನಗದು ಇದ್ದು ಸಿಕ್ಕಿದವರು ವಾಪಸ್ಸು ಹಿಂತಿರುಗಿಸುವಂತೆ ಸಮಾಜಿಕ ತಾಣಗಳ ಮೂಲಕ ಮನವಿ ಮಾಡಿದ್ದಾರೆ.

Exit mobile version