Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಜನರಲ್ಲಿ ಮಾನವೀಯತೆಯ ಕೊಂಡಿಯಾಗಿ ‘ಉಳ್ಳಾಲವಾಣಿ’ ಕಾರ‍್ಯಾಚರಿಸಲಿ: ಸ್ಪೀಕರ್ ಯು.ಟಿ.ಖಾದರ್

UllalaVaniBy UllalaVaniAugust 16, 2024Updated:August 16, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

78 ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ತೊಕ್ಕೊಟ್ಟಿನಲ್ಲಿ ಉಳ್ಳಾಲ ತಾಲೂಕಿನ ಪ್ರಪ್ರಥಮ ಪತ್ರಿಕೆ ‘ಉಳ್ಳಾಲವಾಣಿ’ ಲೋಕಾರ್ಪಣೆ

ಉಳ್ಳಾಲ: ಜನರಲ್ಲಿ ಮಾನವೀಯತೆಯ ಕೊಂಡಿಯಾಗಿ ಉಳ್ಳಾಲವಾಣಿ ಪತ್ರಿಕೆ ಕರ‍್ಯಾಚರಿಸಲಿ. ಪತ್ರಿಕೆ ಮುನ್ನಡೆಸುವ ಜವಾಬ್ದಾರಿ ತಾಲೂಕಿನ ಎಲ್ಲಾ ಜನತೆಗಿದ್ದು, ಎಲ್ಲರ ಆಶೋತ್ತರಗಳಿಗೆ ಪತ್ರಿಕೆ ಸ್ಪಂದಿಸುವಂತಾಗಲಿ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ತಾಲೂಕಿನ ಪ್ರಥಮ ಪತ್ರಿಕೆ ಉಳ್ಳಾಲವಾಣಿಯನ್ನು ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಮೀಟರ್ ಎತ್ತರದ ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಚಾಲನೆ ನೀಡಿ ಮಾತನಾಡಿದರು.

ತಾಲೂಕಿನ ಜನರಲ್ಲಿ ಸಮನ್ವಯತೆಯನ್ನು ಕಾಪಾಡಿಕೊಳ್ಳಲು, ಪ್ರತಿ ಆಚಾರ ವಿಚಾರಗಳು, ಪ್ರವಾಸೋದ್ಯಮ, ಸರಕಾರಿ ಯೋಜನೆಗಳು, ಸಾಧಕರನ್ನು ಹೊರಜಗತ್ತಿಗೆ ಅನಾವರಣಗೊಳಿಸುವ ಜವಾಬ್ದಾರಿ ಪತ್ರಿಕೆಯದ್ದಾಗಿದೆ. ಕ್ಷೇತ್ರದುದ್ದಕ್ಕೂ ಮಾನವೀಯತೆಯ ಜೊತೆಗೆ ಶಾಂತಿ ನೆಲೆಸುವಲ್ಲಿ ಪತ್ರಿಕೆ ಕರ‍್ಯಾಚರಿಸಲಿ ಎಂದು ಶುಭ ಹಾರೈಸಿದರು.

ಉಳ್ಳಾಲ ವಲಯ ಪ್ರಾಥಮಿಕ , ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಸುಮಾರು 16 ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿದರು.

ಸ್ಕೌಟ್ಸ್, ಗೈಡ್ಸ್, ಕಬ್, ಬುಲ್‌ಬುಲ್, 7 ಶಾಲೆಗಳ ವಿದ್ಯಾರ್ಥಿ ವಾದ್ಯವೃಂದ, ಕೆಎಸ್‌ಆರ್‌ಪಿ ಪೊಲೀಸರ ವಾದ್ಯವೃಂದದೊಂದಿಗೆ ಉಳ್ಳಾಲ ಅಬ್ಬಕ್ಕ ಸರ್ಕಲ್‌ನಿಂದ ತೊಕ್ಕೊಟ್ಟು ಓವರ್‌ಬ್ರಿಡ್ಜ್ ವರೆಗೆ ಸುಮಾರು ಒಂದು ಕಿ. ಮೀ. ಪಥ ಸಂಚಲನಲ್ಲಿ ಹೆಜ್ಜೆ ಹಾಕಿದರು.

ಪಥಸಂಚಲನದಲ್ಲಿ ತಾಲೂಕು ಕಚೇರಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ನಗರಾಡಳಿತ ಮತ್ತು ಗ್ರಾಮ ಪಂಚಾಯತ್‌ನ ಸಿಬ್ಬಂದಿ, ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಜನಪ್ರತಿನಿಧಿಗಳೊಂದಿಗೆ ಸ್ಪೀಕರ್ ಯು.ಟಿ.ಖಾದರ್ ಪಥಸಂಚಲನದಲ್ಲಿ ಭಾಗವಹಿಸಿದರು.

ಕಾರ್ಯಕ್ರಮಲ್ಲಿ ದ.ಕ ಜಿಲ್ಲಾ ಕಾರ‍್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಳ್ಳಾಲವಾಣಿ ಪತ್ರಿಕೆಯ ಸಂಪಾದಕ ಮೋಹನ್ ಕುತ್ತಾರ್, ಆರೀಫ್ ಕಲ್ಕಟ್ಟ, ಯಶವಂತ್ ಬೇಕಲ್, ಐತಪ್ಪ ಗಟ್ಟಿ, ಅಶ್ವಿನ್ ಕುತ್ತಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಾರ್ಯನಿರ್ವಹಣಾಧಿಕಾರಿ ಗುರುದತ್ತ್

ಉಳ್ಳಾಲ ನಗರಸಭಾ ಪೌರಾಯುಕ್ತೆ ಮುಖ್ಯಾಧಿಕಾರಿ ವಾಣಿ ವಿ. ಆಳ್ವ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿ ಶೈಲಾ ಜೆ. ಕಾರಗಿ, ದಕ್ಷಿಣ ವಲಯ ಕ್ರ‍್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಹೆಚ್. ಆರ್., ಸೊಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ, ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ, ದೈಹಿಕಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯಸ್, ಕಣಚೂರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಯು. ಕೆ. ಮೋನು, ಎಸಿಪಿ ಧನ್ಯಾ ನಾಯಕ್, ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಎಚ್. ಎನ್. ಮತ್ತಿತರರು ಉಪಸ್ಥಿತರಿದ್ದರು.

ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಪಥ ಸಂಚಲನದಲ್ಲಿ ಪ್ರಥಮ ಸ್ಥಾನ ಪಡೆದರೆ, ಹಝ್ರತ್ ಆಂಗ್ಲ ಮಾಧ್ಯಮ ಶಾಲೆ ಉಳ್ಳಾಲ ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯಿತು.

ಧೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಂ ಹರೇಕಳ ಮತ್ತು ಮೋಹನ್ ಶಿರ್ಲಾಲು, ಹಳೆಕೋಟೆ ಸೈಯ್ಯದ್ ಮದನಿ ಶಾಲೆಯ ಮುಖ್ಯ ಶಿಕ್ಷಕ ಕೆ.ಎಂ.ಕೆ. ಮಂಜನಾಡಿ ಕಾರ್ಯಕ್ರಮ ನಿರ್ವಹಿಸಿದರು.

ಪತ್ರಿಕೆ ಮುಖಪುಟ ವಾಟ್ಸ್ಯಾಪ್ ಮಾಡಿ
ಆಕರ್ಷಕ ಬಹುಮಾನ ನಿಮ್ಮದಾಗಿಸಿ:

ಉಳ್ಳಾಲವಾಣಿ ಪತ್ರಿಕೆಯ ಮುಖಪುಟವನ್ನು ಉಳ್ಳಾಲವಾಣಿ ಕಚೇರಿ 9845478858 ಸಂಖ್ಯೆಗೆ ವಾಟ್ಸ್ಯಾಪ್ ಮಾಡಿ, ಆಕರ್ಷಕ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಿ. ಮುಖಪುಟದ ಭಾವಚಿತ್ರವನ್ನು ಕಳುಹಿಸಿದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಗಳನ್ನು ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಾಗುವುದು. ಲಕ್ಕಿ ಡ್ರಾ ಕುರಿತ ಲೈವ್ ಕಾರ್ಯಕ್ರಮವನ್ನು ನಾವು ಕಳುಹಿಸುವ ಉಳ್ಳಾಲವಾಣಿ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗುವುದು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
ullal Ullalvani UT khader ಉಳ್ಳಾಲವಾಣಿ ಉಳ್ಳಾಲವಾಣಿ ಪತ್ರಿಕೆ ಲೋಕಾರ್ಪಣೆ
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜಾನಪದ ಪರಿಷತ್ತಿನ ಡಾ.ಜೀ.ಶಂ.ಪರಮಶಿವಯ್ಯ ಪ್ರಶಸ್ತಿಗೆ ಪ್ರೊ.ಕೆ.ಚಿನ್ನಪ್ಪ ಗೌಡ ಆಯ್ಕೆ

February 3, 2026

ವ್ಯಂಗ್ಯಚಿತ್ರಗಳಿಗೆ ಸಮಾಜವನ್ನು ತಿದ್ದುವ ಸಾಮರ್ಥ್ಯವಿದೆ: ವೆಂಕಟ್ ಭಟ್ ಎಡನೀರು

February 3, 2026

ಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೊ. ಸುಬ್ಬ ಪಕ್ಕಳ ನಿಧನ

January 28, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d