ಬೆಳ್ತಂಗಡಿ: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ನಿವೃತ್ತ ಶಿಕ್ಷಕರೊಬ್ಬರನ್ನು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ದ.ಕ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿಯ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆಯಾದ ವ್ಯಕ್ತಿಯಾಗಿದ್ದು ತನ್ನ ಮನೆಯ ಅಂಗಳದಲ್ಲೇ ಕೊಲೆ ನಡೆಸಲಾಗಿದೆ. ಏಕಾಏಕಿ
ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ
ಕೊಲೆಗೆ ಕಾರಣ ನಿಗೂಢವಾಗಿದ್ದು ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.


