ಮಂಗಳೂರು: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನಲೆ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಐವನ್ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ.


ಮಂಗಳೂರಿನ ವೆಲೆನ್ಸಿಯದಲ್ಲಿರುವ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ನಡೆದಿದ್ದು ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ ಐವನ್ ಮನೆಯ ಕಿಟಕಿಯ ಫ್ರೇಮ್ ಗೆ ಕಲ್ಲು ಬಿದ್ದಿದೆ.
ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರ ಭೇಟಿ ನೀಡಿ ,ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ.


