Site icon Ullalavani

ದೇರಳಕಟ್ಟೆ: ಕ್ಷೇಮದಲ್ಲಿ ಪ್ರಥಮ ಎಂ.ಬಿ.ಬಿ.ಎಸ್.ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ 2015-16ರ ಸಾಲಿನಲ್ಲಿ ಸೇರ್ಪಡೆಗೊಂಡ ಎಂ.ಬಿ.ಬಿ.ಎಸ್ ಪ್ರಥಮ ವರುಷ ವಿದ್ಯಾರ್ಥಿಗಳನ್ನು ಹಾಗೂ ವಿದ್ಯಾರ್ಥಿ ಪೋಷಕರನ್ನು ಕಾಲೇಜಿಗೆ ಸ್ವಾಗತಿಸುವ ಕಾರ್ಯಕ್ರಮ ಕೆ.ಎಸ್.ಹೆಗ್ಡೆ ಆಡಿಟೋರಿಯಂನಲ್ಲಿ ಕುಲಪತಿ ಪ್ರೋ.ಡಾ.ಎಸ್. ರಮಾನಂದ ಶೆಟ್ಟಿ ಅವರು ನೂತನ ವಿದ್ಯಾರ್ಥಿಗಳಿಗೆ ಕ್ಷೇಮ ಮೆಡಿಕಲ್ ಅಕಾಡೆಮಿಯ ಕಿರು ಪರಿಚಯ ಮಾಡಿಕೊಟ್ಟರು.

ನಿಟ್ಟೆ ವಿವಿ ಕುಲಾಧಿಪತಿ ಎನ್.ವಿನಯ್ ಹೆಗ್ಡೆ ಮಾತನಾಡಿ ವಿದ್ಯಾರ್ಥಿಗಳು ಪೋಷಕರ ಕನಸನ್ನು ನನಸು ಮಾಡುವ ಉದ್ದೇಶದಿಂದ ಬಂದಿದ್ದು ಅದನ್ನು ಈಡೇರಿಸಬೇಕು. ಹಾಗೆಯೇ ಸಂಸ್ಥೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯ, ಶಿಸ್ತು, ಕರ್ತವ್ಯದ ಬಗ್ಗೆ ಬೆಳಕು ಚೆಲ್ಲಿದರು.

ಕಾರ್ಯಕ್ರಮದಲ್ಲಿ ನಿಟ್ಟೆ ವಿವಿ ಕುಲಸಚಿವ ಪ್ರೊ.ಎಂ.ಎಸ್.ಮೂಡಿತ್ತಾಯ, ಕ್ಷೇಮ ಕುಲಸಚಿವ ಡಾ. ಜಯಪ್ರಕಾಶ್ ಶೆಟ್ಟಿ, ಕ್ಷೇಮ ವೈಸ್ ಡೀನ್ ಡಾ.ಪಿ.ಎಸ್.ಪ್ರಕಾಶ್ ಉಪಸ್ಥಿತರಿದ್ದರು.

ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಡೀನ್ ಡಾ. ಸತೀಶ್ ಕುಮಾರ್ ಭಂಡಾರಿ ಅವರು ವಿದ್ಯಾರ್ಥಿ ಹಾಗೂ ಪೋಷಕರನ್ನು ಸ್ವಾಗತಿಸಿದರು.

ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ವೈಸ್ ಡೀನ್ ಡಾ. ಅಮೃತ್ ಮಿರಾಜ್‍ಕರ್ ವಂದಿಸಿದರು.

 

Exit mobile version