Site icon Ullalavani

ಬಂಟ್ವಾಳ ಪುರಸಭೆಯಲ್ಲಿ ಎಸ್ ಡಿಪಿಐ ಪಕ್ಷದ ಜೊತೆ ಕಾಂಗ್ರೆಸ್ ಮತ್ತೊಮ್ಮೆ ಮೈತ್ರಿ!

ಬಂಟ್ವಾಳ: ದ‌.ಕ ಜಿಲ್ಲೆಯ ಬಂಟ್ವಾಳ ಪುರಸಭೆಯ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಎಸ್ ಡಿ ಪಿಐ ಜೊತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಅಧಿಕಾರದ ಗದ್ದುಗೇಯೆರಿದೆ.
ಕಾಂಗ್ರೆಸ್ ನ ವಾಸು ಪೂಜಾರಿ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎಸ್ಡಿಪಿಐ ಸದಸ್ಯ ಮೋನಿಶ್ ಆಲಿಗೆ ಉಪಾಧ್ಯಕ್ಷ ಸ್ಥಾನ‌ ಲಭಿಸಿದೆ.
ಒಟ್ಟು 27 ಸದಸ್ಯ ಬಲದ ಪುರಸಭೆಯಲ್ಲಿ ಬಹುಮತಕ್ಕೆ 14 ಮತಗಳ ಅಗತ್ಯವಿದ್ದಿತು. ಕಾಂಗ್ರೆಸ್ 12 ಸ್ಥಾನ ಹೊಂದಿತ್ತಾದರೂ ಕಾಂಗ್ರೆಸ್ ಸದಸ್ಯರೊಬ್ಬರ ರಾಜೀನಾಮೆಯಿಂದ ಕಾಂಗ್ರೆಸ್ ಬಲ 11ಕ್ಕೆ ಕುಸಿದಿತ್ತು. ಬಿಜೆಪಿ 11 ಹಾಗೂ ಎಸ್‌ಡಿಪಿಐ 4 ಸದಸ್ಯರ ಬಲ ಹೊಂದಿತ್ತು 11 ಸ್ಥಾನ ಹೊಂದಿರುವ ಬಿಜೆಪಿಗೆ ಸ್ಥಳೀಯ ಶಾಸಕರು ಮತ್ತು ಸಂಸದರ ಮತ ಸೇರಿ 13 ಮತಗಳಿದ್ದವು. ಆದರೆ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಮೈತ್ರಿ ಸಾಧಿಸಿ 15 ಮತಗಳ ಬಹುಮತದ ಮೂಲಕ‌ ಅಧಿಕಾರಕ್ಕೆ ಕಾಂಗ್ರೆಸ್ ನ ವಾಸು ಪೂಜಾರಿ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎಸ್ಡಿಪಿಐ ಸದಸ್ಯ ಮೋನಿಶ್ ಆಲಿಗೆ ಉಪಾಧ್ಯಕ್ಷ ಸ್ಥಾನ ಪಡೆದುಕೊಂಡಿದ್ದಾರೆ.

Exit mobile version