Site icon Ullalavani

ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ: ಇಬ್ಬರ ಬಂಧನ

ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಗೆ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರ ಬಂಧಿಸಲಾಗಿದೆ.

ವಿ ಎಚ್ ಪಿ ಹಾಗೂ ಬಜರಂಗದಳದ ಕಾರ್ಯಕರ್ತರಾದ ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳಾಗಿದ್ದಾರೆ.

ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯಪಾಲರ ಕುರಿತು ಎಂ ಎಲ್ ಸಿ ಐವನ್ ಡಿಸೋಜಾ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಐವನ್ ಡಿಸೋಜಾ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆಗಸ್ಟ್ 20 ರ ತಡ ರಾತ್ರಿ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆದಿತ್ತು. ಬೈಕ್ ನಲ್ಲಿ ಬಂದ ಇಬ್ಬರು ಐವನ್ ಮನೆ ಮೇಲೆ ಕಲ್ಲು ತೂರಿ ಪರಾರಿ ಯಾಗಿದ್ದರು. ಪ್ರಕರಣದ ಕುರಿತು ತನಿಖೆ ನಡೆಸಿ ಇಬ್ಬರನ್ನು  ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Exit mobile version