
ಬೆಂಗಳೂರು : ಅ.13 ರಂದು ದುಬೈ ಊದ್ ಮೇತದಲ್ಲಿರುವ ದುಬೈ ಜೆಮ್ ಶಾಲಾ ಸಭಾಂಗಣದಲ್ಲಿ ನಡೆಯುವ ದುಬೈ ಗಡಿನಾಡ ಉತ್ಸವದ ಲಾಂಛನವನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆಗೊಳಿಸಿದರು.
ಸಮಾರಂಭದಲ್ಲಿ ಸಂಸದ ಎಂ.ಕೆ.ರಾಘವನ್ , ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್, ದುಬೈ ಗಡಿನಾಡ ಉತ್ಸವದ ಸಂಚಾಲಕ ಝಡ್ ಎ ಕಯ್ಯಾರ್ ಮುಂತಾದವರು ಉಪಸ್ಥಿತರಿದ್ದರು.

