ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.
2023 ರ ಜೂನ್ ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ 47 ವರ್ಷದ ಮಹಿಳೆಯಿಂದ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನಲೆ ಎಫ್ ಐಆರ್ ದಾಖಲಿಸಲಾಗಿದೆ. ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಪುತ್ತಿಲ ಬಂಡಾಯ ಸ್ಪರ್ಧೆ ಮಾಡಿದ್ದು ಬಿಜೆಪಿಗೆ ಠಕ್ಕರ್ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು.ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗ ಫಿದಾ ಆಗಿರುವ ಬಗ್ಗೆ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖ
ಇದೀಗ ಮಹಿಳೆ ದೂರಿನಡಿ ಪುತ್ತಿಲ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಪುತ್ತಿಲ ಮತ್ತು ಮಹಿಳೆಯೊಬ್ಬರ ಆಡಿಯೋ ಕೂಡ ಆಗಿತ್ತು.
ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


