Site icon Ullalavani

ಭೀಕರ ರಸ್ತೆ ಅಪಘಾತಕ್ಕೆ ನವವಿವಾಹಿತೆ ಬಲಿ

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ನವ ವಿವಾಹಿತೆ  ಮೃತಪಟ್ಡು ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಶನಿವಾರ ನಡೆದಿದೆ.
ನವವಿವಾಹಿತೆ ಮಾನಸ ಮೃತಪಟ್ಟಿದ್ದು ಪತಿ ಅನಿಶ್ ಕೃಷ್ಣ ಗಂಭೀರ ಗಾಯಗೊಂಡು ಆಸ್ಪತ್ರೆ ಗೆ ದಾಖಲಿಸಲಾಗಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ  ಹಾಗೂ‌ ಪತ್ನಿ ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿಹೊಡೆದಿದೆ‌.


ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ನವದಂಪತಿಗಳಿಬ್ಬರು ಬಂದಿದ್ದು ವಾಪಸು ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು .ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Exit mobile version