ಕೊಣಾಜೆ: ರಾಜ್ಯ ಸರಕಾರದ ತೀರ್ಮಾನದಂತೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೌಹಾರ್ಧತೆಯ, ಏಕತೆಯ ದಿನವಾಗಿ ರಾಜ್ಯದಾದ್ಯಂತ ಮಾನವ ಸರಪಳಿಯನ್ಬು ಆಯೋಜಿಸಲು ತೀರ್ಮಾನಿಸಿದ್ದು, ಮಂಗಳೂರು ಪಡೀಲ್‌ನಿಂದ ಫರಂಗಿಪೇಟೆಯವರೆಗೆ ನಡೆಯುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ಸಿಗೆ ಮಂಗಳೂರು ವಿಧಾನಸಭಾ ಕ್ಷೇತ್ರದ ಜನರ ಸಹಕಾರ ಅಗತ್ಯ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು.


ಮಂಗಳೂರು ವಿವಿ ಎಂಬಿಎ ವಿಭಾಗದ ಸಭಾಂಗಣದಲ್ಲಿ ರಾಜ್ಯ ಸರಕಾರದ ವತಿಯಿಂದ ನಡೆಯುವ ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯದಲ್ಲಿ ಬೀದರ್ ನಿಂದ ಚಾಮರಾಜ ನಗರದವರೆಗೆ ಮಾನವ ಸತೊಳಿ ನಡೆಯಲಿದ್ದು ಉಳ್ಳಾಲ ತಾಲೂಕು ಮತ್ತು ಮಂಗಳೂರು ವಿಧಾನಸಭೆ ವ್ಯಾಪ್ತಿಯಲ್ಲಿ ಕಾರ್ಯಕ್ರಮವನ್ಬು ಯಶಸ್ವಿಗೊಳಿಸಲು ತಾಲೂಕು ಆಡಳಿತದೊಂದಿಗೆ ಎಲ್ಲಾ ಇಲಾಖೆಗಳು, ಶಿಕ್ಷಣ ಸಂಸ್ಥೆಗಳು, ಜನಪ್ರತಿನಿಽಗಳ ಸಹಕಾರ ಅಗತ್ಯ ಎಂದು ಉಳ್ಳಾಲ ತಾಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಭಾಗವಹಿಸುವಿಕೆ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಉಳ್ಳಾಲ ತಾಲೂಕು ತಹಶೀಲ್ದಾರ್ ಬಿ.ಎ ಪುಟ್ಟರಾಜು, ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಽಕಾರಿ ಗುರುದತ್ತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಂಗಳೂರು ಶಿಶು ಅಭಿವೃದ್ಧಿ ಯೋಜನಾ ಅಽಕಾರಿ ಶೈಲಾ ಕಾರ್ಗಿ, ಬಂಟ್ವಾಳ ತಾಲೂಕು ಶಿಶು ಅಭಿವೃದ್ಧಿ ಯೋಜನಾಽಕಾರಿ ಮುಮ್ತಾಝ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ , ಕ್ಷೇತ್ರ ಶಿಕ್ಷಣಾಽಕಾರಿ ಈಶ್ವರ್,ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ದಿಲೀಪ್, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ , ಉಳ್ಳಾಲ ತಾಲೂಕು ಗ್ರಾಮ ಪಂಚಾಯತ್‌ಗಳ ಅಽಕಾರಿಗಳು, ಜನಪ್ರತಿನಿಽಗಳ ವಿವಿಧ ಇಲಾಖೆಗಳ ಅಽಕಾರಿಗಳು ಉಪಸ್ಥಿತರಿದ್ದರು.

