ಮಂಗಳೂರು: ಜೀವಂತ ಶ್ವಾನವನ್ನು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ಕೊಟ್ಟು ಅಮಾನವೀಯ ವರ್ತನೆ ತೋರಿದ ವಿಡಿಯೋ ತುಣುಕ್ಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರು ನಗರದ ಡೊಂಗರಕೇರಿಯಲ್ಲಿ ಈ ಘಟನೆ ನಡೆದಿದ್ದು ಡೊಂಗರಕೇರಿಯ ಕುಟುಂಬವೊಂದರ ಸದಸ್ಯರು ಬೇರೆ ದೇಶದಲ್ಲಿ ವಾಸಿಸುತ್ತಿದ್ದರು. ವೃದ್ಧ ಮಹಿಳೆ ಮಾತ್ರ ಈ ಮನೆಯಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ಮನೆಯ ಶ್ವಾನ ಇತ್ತೀಚೆಗೆ ಕೆಲವು ಕಡೆ ಉಪಟಳ ಮಾಡಿರೋ ಆರೋಪ.ಇದೇ ಕಾರಣಕ್ಕೆ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ಕೊಟ್ಟು ವಿಚಿತ್ರ ವರ್ತನೆ ತೋರಿದ್ದಾರೆ. ತ್ಯಾಜ್ಯ ವಿಲೇವಾರಿ ಮಾಡುವ ಕಾರ್ಮಿಕರು ಕೂಡ ತ್ಯಾಜ್ಯದೊಡನೆ ನಾಯಿಯನ್ನೂ ಪಚ್ಚನಾಡಿಗೆ ಸಾಗಿಸಿದ್ದಾರೆ..ಈ ಘಟನೆಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ವೀಡಿಯೊ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಎರಡು ದಿನಗಳ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ವಿವರ ನೀಡುವಂತೆ ಪಶುಪಾಲನೆ ಇಲಾಖೆಯಿಂದ ಪಾಲಿಕೆಗೆ ನೋಟಿಸ್ ನೀಡಿದ್ದಾರೆ. ಸದ್ಯ ಪಚ್ಚನಾಡಿ ಡಂಪಿಂಗ್ ಯಾರ್ಡ್ ಬಳಿ ಶ್ವಾನದ ಹುಡುಕಾಟ, ಆದರೆ ಪತ್ತೆಯಾಗಿಲ್ಲ ಹಾಗೂ ಪಕ್ಕದ ಮನೆಯ ಸಿಸಿಟಿವಿಯಲ್ಲೂ ದೃಶ್ಯ ಸೆರೆಯಾಗಿದೆ.
