
ಮಂಗಳೂರು: ಬಿಜೆಪಿ ಸದಸ್ಯತನ ಅಭಿಯಾನದ ಪ್ರಯುಕ್ತ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಯಾದವ್ ಅವರನ್ನು ಶನಿವಾರ ಬೆಳಿಗ್ಗೆ ಮಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ವತಿಯಿಂದ ಒಕ್ಕೂಟದ ಗೌರವಾಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷ ನಂದನ್ ಮಲ್ಯ, ಅಲೆಮಾರಿ ಜನಾಂಗದ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಅನಂತ ಕೃಷ್ಣ ಯಾದವ್, ಒಕ್ಕೂಟದ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಬಸವರಾಜ್ ಹೆಳವ ಉಪಸ್ಥಿತರಿದ್ದರು.
