Site icon Ullalavani

‘ಅನ್ಯ ಧರ್ಮೀಯರ ಹಾಲ್ ಗಳಲ್ಲಿ ಮದುವೆ ಆಗಬೇಡಿ’ ಎಂದು ಭಾಷಣ ಮಾಡಿದ ಡಾ.ಅರುಣ್ ಉಳ್ಳಾಲ್ ವಿರುದ್ಧ ಎಫ್ಐಆರ್!

ಉಳ್ಳಾಲ: ಧರ್ಮ ದ್ವೇಷದ ಭಾಷಣ ಆರೋಪದಡಿ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಿಲಿಸಲಾಗಿದೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.

‘ಹಿಂದುಗಳು ಹಿಂದು ಮಾಲಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು’. ‘ಹಿಂದು ಮಾಲಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು”.

”ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು’.’ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ’ ಎಂದಿದ್ದ ಅರುಣ್ ಉಳ್ಳಾಲ್ ಅವರ ಮೇಲೆ ಸ್ವಯಂ ಪ್ರೇರಿತ ಪ್ರಕರಣವನ್ನು ಮಂಗಳೂರು ಸೆನ್ ಪೊಲೀಸರು ದಾಖಲಿಸಿದ್ದಾರೆ‌.


ಉಳ್ಳಾಲ ದ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ  ನವದಂಪತಿ ಸಮಾವೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಿದ್ದ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND  196,  351 (BNS), 2023 ರಂತೆ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಿರುವ ಅರುಣ್ ಉಳ್ಳಾಲ್ ಅವರ ಭಾಷಣದ ವಿಡಿಯೋ ವೈರಲ್ ಬೆನ್ನಲ್ಲೇ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಪರವಿರೋಧ ಚರ್ಚೆಗೆ ಗ್ರಾಸವಾಗಿತ್ತು. ಎಡಪಂಥೀಯರು ಹಾಗೂ ಅನ್ಯ ಧರ್ಮೀಯ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ವಿರೋಧದ ಬೆನ್ನಲ್ಲೇ
ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Exit mobile version