Site icon Ullalavani

ಕೊಲ್ಯ : ಶ್ರೀ ಶಾರದಾ ಮಾತೆಯ ನೂತನ ಬೆಳ್ಳಿ ಬಿಂಬದೊಂದಿಗೆ ವಿಜೃಂಭಣೆಯಿಂದ ಜರಗಿದ ಹಸಿರುವಾಣಿ ಹೊರೆದಿಬ್ಬಣ ಶೋಭಾಯಾತ್ರೆ

ಕೊಲ್ಯ: ತೊಕ್ಕೊಟ್ಟು ಶ್ರೀ ಜೈ ವೀರ ಮಾರುತಿ ವ್ಯಾಯಾಮ ಶಾಲೆಯಿಂದ ಕೊಲ್ಯದವರೆಗೆ ಶ್ರೀ ಶಾರದಾ ಮಾತೆಯ ನೂತನ ಬೆಳ್ಳಿ ಬಿಂಬದೊದಿಗೆ ಹಸಿರುವಾಣಿ ಹೊರೆದಿಬ್ಬಣ ಶೋಭಾಯಾತ್ರೆಯು ವಿಜೃಂಭಣೆಯಿಂದ ನಡೆಯಿತು.
ಕೊಲ್ಯ ಶ್ರೀ ಶಾರದಾ ಸೇವಾ ಟ್ರಸ್ಟ್ , ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ, ಶ್ರೀ ಶಾರದಾ ಮಂದಿರ ನಿರ್ಮಾಣ ಸಮಿತಿ ವತಿಯಿಂದ ಕೊಲ್ಯದಲ್ಲಿ ಅ.6 ರಿಂದ 12 ರ ವರೆಗೆ 43 ನೇ ವರ್ಷದ ಶಾರದಾ ಮಹೋತ್ಸವ ಮತ್ತು ಅ.7 ಸೋಮವಾರ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಶಾರದಾ ಮಂದಿರದ ಲೋಕಾರ್ಪಣೆ ನಡೆಯಲಿದೆ.
ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರದ ಪ್ರದಾನ ಅರ್ಚಕರಾದ ಮಂಜಪ್ಪ ಕಾರ್ನವರ್ ಅವರು ಹಸಿರುವಾಣಿ ಹೊರೆದಿಬ್ಬಣ ಶೋಭಾಯಾತ್ರೆಗೆ ಚಾಲನೆ ನೀಡಿದರು.
ಬೆಂಗಳೂರಿನ ದಿ.ಮೈಸೂರು ಇಲೆಕ್ಟ್ರಿಕಲ್ಸ್ ಲಿ.ನ ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಾತನಾಡಿ ಹೊರೆಕಾಣಿಕೆಯು ಯಶಸ್ವಿಯಾಗಿ ನಡೆದರೆ ಇಡೀ ಉತ್ಸವವೇ ಸಾಂಘವಾಗಿ ನಡೆಯುವುದು. ನೂತನ ಶಾರದಾ ಮಂದಿರ ನಿರ್ಮಾಣಕ್ಕೆ ಬಹಳಷ್ಟು ಜನರು ಬೆವರು ಹರಿಸಿದ್ದಾರೆ.ಮಂದಿರದಲ್ಲಿ ಮುಂದಿನ ದಿವಸಗಳಲ್ಲಿ ಧರ್ಮ ಜಾಗೃತಿಯ ಚಟುವಟಿಕೆಗಳು ನಿರಂತರವಾಗಿ ನಡೆದು ಧಾರ್ಮಿಕ ಶ್ರದ್ಧಾ ಕೇಂದ್ರವಾಗಿ ಬೆಳಗಲಿ ಎಂದು ಆಶಿಸಿದರು.
ಶಾರದಾ ಮಂದಿರ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷರಾದ ಸೌಂದರ್ಯ ರಮೇಶ್ ,ಅಧ್ಯಕ್ಷರಾದ ಸತೀಶ್ ಕುಂಪಲ, ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರವೀಂದ್ರನಾಥ ರೈ,ದೇರಳಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಚಂದ್ರಹಾಸ್ ಅಡ್ಯಂತಾಯ,ಉದ್ಯಮಿ ಶಿವರಾಮ ಶೆಟ್ಟಿ,ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ಗೋಪಾಲ ಕುತ್ತಾರು,ಚೀರುಂಭ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುರೇಶ್ ಭಟ್ನಗರ,ಕುಂಪಲ ದುರ್ಗಾ ಪರಮೇಶ್ವರ ಕ್ಷೇತ್ರದ ಪ್ರದಾನ ಅರ್ಚಕರಾದ ಭವಾನಿ ಶಂಕರ ಶಾಂತಿ,ಉಳ್ಳಾಲ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು,ಬಿಜೆಪಿ ಮುಖಂಡರಾದ ಸೀತಾರಾಮ ಬಂಗೇರ,ಚಂದ್ರಶೇಖರ ಉಚ್ಚಿಲ್, ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾದ ಪುರುಷೋತ್ತಮ ಗಟ್ಟಿ, ಸೋಮೇಶ್ವರ ಪುರಸಭಾ ಉಪಾಧ್ಯಕ್ಷರಾದ ರವಿಶಂಕರ ಸೋಮೇಶ್ವರ, ಸದಸ್ಯರಾದ ಮೋಹನ್ ಶೆಟ್ಟಿ, ಪುರುಷೋತ್ತಮ ಗಟ್ಟಿ ಕೊಲ್ಯ ,ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಗಣೇಶ್ ಕೊಲ್ಯ,ಶಾರದಾ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪ್ರಕಾಶ್ ಹೆಚ್,ಪ್ರದಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಕೆ.ಎಸ್, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ, ಪ್ರಮುಖರಾದ ಭಗವಾನ್ ದಾಸ್ ತೊಕ್ಕೊಟ್ಟು ಮೊದಲಾದವರು ಉಪಸ್ಥಿತರಿದ್ದರು.
ಶಾರದಾ ಮಂದಿರ ಲೋಕಾರ್ಪಣಾ ಸಮಿತಿಯ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಪ್ರದಾನ ಸಂಚಾಲಕರಾದ ಪ್ರವೀಣ್ ಎಸ್. ಕುಂಪಲ ಕಾರ್ಯಕ್ರಮ ನಿರೂಪಿಸಿದರು.

Exit mobile version