ಉಳ್ಳಾಲ: ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ ಕಾಂಗ್ರೆಸ್ ಪಕ್ಷದ ಉಳ್ಳಾಲ ನಗರಸಭೆ ಕೌನ್ಸಿಲರ್ ಗಳ ಜತೆಗೂಡಿ ಉಳ್ಳಾಲ ನಗರಸಭೆಯಲ್ಲಿ ಮತ ಚಲಾಯಿಸಿದರು.




ಚುನಾವಣಾ ಕಣದಲ್ಲಿ ಕಿಶೋರ್ ಬಿ.ಆರ್. (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಅನ್ವರ್ ಸಾದತ್ ಎಸ್. (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ), ಮತ್ತು ದಿನಕರ ಉಳ್ಳಾಲ (ಪಕ್ಷೇತರ) ಸ್ಪರ್ಧಿಸುತ್ತಿದ್ದಾರೆ.
ಉಳ್ಳಾಲ ತಾಲೂಕಿನಲ್ಲಿ 20 ಮತಗಟ್ಟೆಗಳಿದ್ದು, ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪ.ಪಂ ಸೇರಿದಂತೆ 17 ಗ್ರಾಮ ಪಂಚಾಯತ್ ಗಳಲ್ಲಿ ಮತದಾನ ನಡೆಯುತ್ತಿದೆ.
ಒಟ್ಟು 427 ಸದಸ್ಯರು ಮತದಾನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 11 ಗಂಟೆಯವರೆಗೆ 427 ಮಂದಿ ಮತದಾನದಲ್ಲಿ ಭಾಗಿಯಾಗಿದ್ದು , ಶೇ.47.47ಮತದಾನ ನಡೆದಿದೆ.


