ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕಿನ್ಯಾ: ಬಸ್ಸೊಂದು ಕಮರಿಗೆ ಉರುಳಿ ಮನೆಯೊಂದರ ಕಂಪೌಂಡಿಗೆ ಡಿಕ್ಕಿ ಹೊಡೆದಿರುವ ಘಟನೆ ಕಿನ್ಯಾ ಸಮೀಪದ ಸಂಕೇಶ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮಂಗಳೂರಿನಿಂದ ಕಿನ್ಯಾ ಕಡೆಗೆ ತೆರಳುತ್ತಿದ್ದ ಸಾತ್ಕೋ ಟ್ರಾವೆಲ್ಸ್ ಬಸ್ಸಿನ ಸ್ಟೇರಿಂಗ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 6 ಜನ ಪ್ರಯಾಣಿಕರಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.