Site icon Ullalavani

ಸ್ಪರ್ಧೆಗಳಲ್ಲಿ ಪ್ರಶಸ್ತಿಗಿಂತ ಭಾಗವಹಿಸುವಿಕೆ ಅತಿ ಮುಖ್ಯ :ಮೋಹನ್ ಕುಮಾರ್ ಉಳ್ಳಾಲ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಮಕ್ಕಳಲ್ಲಿರುವ ಕಲೆಯನ್ನು ಹೊರಹೊಮ್ಮಲು ಸರಕಾರದ ಉತ್ತಮ ಕಾರ್ಯಕ್ರಮ ಪ್ರತಿಭಾ ಕಾರಂಜಿಯಾಗಿದ್ದು, ಸ್ಪರ್ಧೆಗಳಲ್ಲಿ ಪ್ರಶಸ್ತಿಗಿಂತ ಭಾಗವಹಿಸುವಿಕೆ ಅತಿ ಮುಖ್ಯ ಎಂದು ನಿವೃತ್ತ ಶಿಕ್ಷಕ, ನಾಟ್ಯಗುರು ಶಾಂತಲಾ ಪ್ರಶಸ್ತಿ ವಿಜೇತ ಮೋಹನ್ ಕುಮಾರ್ ಉಳ್ಳಾಲ ಅಭಿಪ್ರಾಯಪಟ್ಟರು.

ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸರ್ವ ಶಿಕ್ಷಣ ಅಭಿಯಾನ ಜಂಟಿ ಆಶ್ರಯದಲ್ಲಿ ಉಳ್ಳಾಲ ಅನುದಾನಿತ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಳ್ಳಾಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉತ್ಸವ-2015-16 ನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಗವೀರ ಸಂಘದ ಅಧ್ಯಕ್ಷ ಸದಾನಂದ ಬಂಗೇರ ವಹಿಸಿದ್ದರು. ಉಳ್ಳಾಲ ನಗರಸಭೆ ಅಧ್ಯಕ್ಷೆ ಗಿರಿಜಾ ಬೈ ಉದ್ಘಾಟಿಸಿದರು. ಶಾಲಾ ಸಂಚಾಲಕ ಬಾಬು ಬಂಗೇರ, ನಗರಸಭೆ ಸದಸ್ಯೆ ಮೀನಾಕ್ಷಿ ಬಂಗೇರ, ಮಾರುತಿ ಯುವಕ ಮಂಡಲದ ಅಧ್ಯಕ್ಷ ಕಿರಣ್ ಕುಮಾರ್, ದಾಮೋದರ ಉಳ್ಳಾಲ್, ಬಾಬು ಸಾಲ್ಯಾನ್, ಹಳೇಕೋಟೆ ಶಾಲಾ ಮುಖ್ಯಶಿಕ್ಷಕ ಕೆ.ಎಂ.ಕೆ ಮಂಜನಾಡಿ, ಟಿಪ್ಪು ಸುಲ್ತಾನ್ ಶಾಲಾ ಮುಖ್ಯಶಿಕ್ಷಕ ಎಂ.ಹೆಚ್ ಮಲಾರ್, ಪೆರ್ಮನ್ನೂರು ಸಿಆರ್ ಪಿ ಹರ್ಷಲತಾ, ಉಳ್ಳಾಲ ಸಿಆರ್ ಪಿ ನಳಿನಿ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯಿನಿ ವೇದಾವತಿ ಸ್ವಾಗತಿಸಿದರು. ಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು. ಸಿಆರ್ ಪಿ ನಳಿನಿ ವಂದಿಸಿದರು.

Exit mobile version