Site icon Ullalavani

ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ತ್ಯಾಗಮ್ ಆಯ್ಕೆ

ಮಂಗಳೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ‍್ಯಕಾರಿಣಿ ಸಭೆಯು ಇತ್ತೀಚಿಗೆ ಕೋಲಾರದಲ್ಲಿ ನಡೆದಿದ್ದು ಉಳ್ಳಾಲ ತಾಲೂಕು ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಮ್ ಹರೇಕಳ ಇವರು ಅವಿರೋಧವಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಈಗಾಗಲೇ ಇವರು ಮಂಗಳೂರು ತಾಲೂಕು ಸಂಘದ ಮಾಜಿ ಅಧ್ಯಕ್ಷರಾಗಿ, ಜಿಲ್ಲಾ ಸಂಘದ ಕೋಶಾಧಿಕಾರಿಯಾಗಿ, ರಾಜ್ಯ ಸಂಘದ ಪ್ರಚಾರ ಸಮಿತಿ ಮುಖ್ಯಸ್ಥರಾಗಿ, ಮೈಸೂರು ವಿಭಾಗೀಯ ಕಾರ್ಯಾಧ್ಯಕ್ಷರಾಗಿ, ಇದೀಗ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಯಾಗಿದ್ದಾರೆ. ಇದೇ ಪ್ರಥಮ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಕರೊಬ್ಬರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.

Exit mobile version