Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಸರಕಾರದ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವುದು ನಮ್ಮೆಲ್ಲರ ಕರ್ತವ್ಯ – ಪ್ರವೀಣ ಕುಮಾರಿ ರೈ

UllalaVaniBy UllalaVaniDecember 20, 2024Updated:December 20, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ಪಿ ಎಂ ಪೋಷಣ್ – ಮಧ್ಯಾಹ್ನ ಉಪಹಾರ ಯೋಜನೆಯು ಸರಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಸರಕಾರದ ಬಹಳ ಮುಖ್ಯ ಯೋಜನೆಗಳಲ್ಲಿ ಒಂದಾಗಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಅದೆಷ್ಟೋ ಮಕ್ಕಳ ಹಸಿವನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇವುಗಳನ್ನು ಬಹಳ ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಅನುಷ್ಠಾನ ಮಾಡುವಲ್ಲಿ ಶಿಕ್ಷಕರ ಮತ್ತು ಅಧಿಕಾರಿ ವರ್ಗದವರ ಪಾತ್ರ ಹಿರಿದು. ಈ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಿ, ಎಲ್ಲಾ ದಾಖಲೆಗಳನ್ನು ಅತ್ಯುತ್ತಮ ವಾಗಿ ನಿರ್ವಹಿಸಿ ಕೊಂಡು ಬರುತ್ತಿರುವ ಎಲ್ಲಾ ಶಿಕ್ಷಕರುಗಳಿಗೆ ಅಭಿನಂದನೆಗಳು ಎಂದು ಮಂಗಳೂರು ತಾಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರು ಪ್ರವೀಣ ಕುಮಾರಿ ರೈ ಅವರು ತಿಳಿಸಿದರು.

ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜು ನೌಕರರ ಸಂಘ ಮಂಗಳೂರು ದಕ್ಷಿಣ ವಲಯದ ವತಿಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ಹಮ್ಮಿ ಕೊಂಡ ಪಿ ಎಂ ಪೋಷಣ್ ಯೋಜನೆಯ ಯಶಸ್ವಿ ಅನುಷ್ಠಾನ ಮತ್ತು ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಈಶ್ವರ್ ಅವರು ವಹಿಸಿ ಶೈಕ್ಷಣಿಕ ರಂಗದಲ್ಲಿ ಸರಕಾರದ ಯಾವುದೇ ಯೋಜನೆಗಳನ್ನು ತಳ ಮಟ್ಟದಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದಾಗ ಸರಕಾರಿ ಶಾಲೆಗಳು ಉನ್ನತ ಮಟ್ಟದ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತದೆ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಅದೆಷ್ಟೋ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ರೂ ಎಲ್ಲಾ ಯೋಜನೆ ಗಳನ್ನು ಶಿಸ್ತು ಬದ್ಧವಾಗಿ ಕಾರ್ಯ ರೂಪಕ್ಕೆ ತರುತ್ತಿರುವುದು ಅಭಿನಂದನೀಯ ಎಂದರು.

ಇದೇ ಸಂದರ್ಭದಲ್ಲಿ ಏಳನೇ ವೇತನ ಶ್ರೇಣಿಯಂತೆ ಪರಿಷ್ಕರಣೆ ಯಾಗಿರುವ ವೇತನವನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ಎಲ್ಲಾ ಶಾಲೆಗಳಿಗೆ ನಿಗದಿತ ಸಮಯದಲ್ಲೇ ಸಿಗುವಂತೆ ಮಾಡಿರುವುದು ಮಾತ್ರವಲ್ಲದೇ ಶಿಕ್ಷಕ ಸ್ನೇಹಿ ಅದೆಷ್ಟೋ ತರಬೇತಿಗಳು ಹಾಗೂ ವ್ಯವಸ್ಥೆಗಳಿಗೆ ಪೂರಕವಾಗಿ ಮಾರ್ಗದರ್ಶನ ನೀಡುತ್ತಾ ಬಂದಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಈಶ್ವರ್ ಅವರನ್ನು ಸನ್ಮಾನಿಸಲಾಯಿತು.
ಹಾಗೂ ಕಚೇರಿ ಅಧಿಕಾರಿಗಳಾದ ಸಂಧ್ಯಾ, ಮಹಮ್ಮದ್ ರೌಫ್, ಕಿರಣ್, ಚೇತನ್, ಸವಿತಾ ಬಜಾಲ್,ಮೊಹಮ್ಮದ್ ಫಾಝಿಲ್ ಉಳ್ಳಾಲ , ಸುನೀತ ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ತ್ಯಾಗಮ್ ಹರೇಕಳ ಮುಂತಾದವರನ್ನು ಸನ್ಮಾನಿಸಲಾಯಿತು.ಹಾಗೂ ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಕೊಡಲ್ಪಟ್ಟ ಗುರುತಿನ ಚೀಟಿಯನ್ನು ಶಿಕ್ಷಕರುಗಳಿಗೆ ಹಸ್ತಾಂತರ ಮಾಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ತಾಲೂಕು ಅಕ್ಷರ ದಾಸೋಹ ಕಚೇರಿಯ ಸಹಾಯಕ ನಿರ್ದೇಶಕರಾದ ವಿಷ್ಣು ಪ್ರಸಾದ್ ಅವರು ಮಾಹಿತಿಯನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷರು ಲಿಲ್ಲಿ ಪಾಯ್ಸ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಮೋಹನ್ ಶಿರ್ಲಾಲ್, ಸಂಘದ ಉಪಾಧ್ಯಕ್ಷರು ರಾಘನಾಥ ಭಟ್, ರಾಧಾಕೃಷ್ಣ ರೈ, ತಿಪ್ಪೋಜಿ ರಾವ್ ಮುಂತಾದವರು ವೇದಿಕೆಯಲ್ಲಿ ಇದ್ದರು. ಅನುದಾನಿತಾ ಶಾಲಾ ಕಾಲೇಜು ನೌಕರರ ಸಂಘ ಮಂಗಳೂರು ದಕ್ಷಿಣ ವಲಯದ ಅಧ್ಯಕ್ಷರು ಕೆ ಎಂ ಕೆ ಮಂಜನಾಡಿ ಪ್ರಸ್ತಾವಿಕ ಮಾತುಗಳನ್ನು ಆಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ತ್ಯಾಗಮ್ ಹರೇಕಳ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷರು ಗುರುಮೂರ್ತಿ ವಂದಿಸಿದರು. ಭಾರತ್ ಪ್ರೌಢಶಾಲೆ ಉಳ್ಳಾಲ ಮುಖ್ಯ ಶಿಕ್ಷಕರು ವಿನಯ ಕುಮಾರಿ ವೈ ಕಾರ್ಯಕ್ರಮ ನಿರೂಪಿಸಿದರು. ಗ್ಲೋರಿಯ , ಭವ್ಯ, ರೋನಾಲ್ಡ್ ಪೌಲ್, ಲಾನ್ಸಿ ಸಿಕ್ವೆರ, ಅರುಣ್ ಪ್ರಸಾದ್ ರೈ, ಮೋಹನ್ ದಾಸ್ ರೈ, ಪ್ಲಾವಿಯ ಪಾಯ್ಸ್ ಮುಂತಾದವರು ಸಹಕರಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ..!!

March 16, 2026

ಎಸ್ಸಸ್ಸಫ್ ಬಾಳೆಪುಣಿ ಶಾಖಾ ವತಿಯಿಂದ ಮಾಸಿಕ ಬುರ್ಧಾ ಮಜ್ಲಿಸ್ ಹಾಗೂ ಬ್ರಹತ್ ಇಫ್ತಾರ್ ಕೂಟ

March 16, 2026

ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ

March 14, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಆರೋಪಗಳಿಗೆ ಸಾಕ್ಷಿಗಳಿಲ್ಲ; ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

By UllalaVaniMarch 17, 20260

ಮೂಡುಬಿದಿರೆ; ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆರೋಪಗಳ ಬಗ್ಗೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಬಾವಿಗೆ ಬಿದ್ದ ಎರಡು ವರ್ಷದ ಮಗು; ಅದೃಷ್ಟವಶಾತ್‌ ಪಾರು

March 17, 2026

ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ದೂರು ದಾಖಲು

March 17, 2026

ಕೆ ಎಂ ಕೆ ಮಂಜನಾಡಿಯವರಿಗೆ ಸಂಘಟನಾ ಸ್ಪೂರ್ತಿ ಪ್ರಶಸ್ತಿ

March 17, 2026
1 2 3 … 1,835 Next
Automatic YouTube Gallery

ಕೊಣಾಜೆ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ*ಕಿ ಒಣಹುಲ್ಲಿಗೆ ತಾಗಿ ಧಗಧಗನೇ ಹೊತ್ತಿ ಉ#ರಿದ ಹುಲ್ಲು..!

ಒಣಹುಲ್ಲಿಗೆ ಬೆಂಕಿ ತಗುಲಿ ರಾಜ್ಯ ಹೆ. ರಸ್ತೆ ಬದಿಗೆ ವ್ಯಾಪಿಸಿದ ಬೆಂ#ಕಿ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ#ಕಿ ವ್ಯಾಪಿಸಿರುವ ಶಂಕೆ ವ್ಯಕ್ತ

ಕೊಣಾಜೆ ಮಂಗಳಗoಗೋತ್ರಿಯ ಕುಲಸಚಿವರ ಬಂಗಲೆ ಮುಂಭಾಗ ಘಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ*ಕಿ ಒಣಹುಲ್ಲಿಗೆ ತಾಗಿ ಧಗಧಗನೇ ಹೊತ್ತಿ ಉ#ರಿದ ಹುಲ್ಲು..!
Now Playing
ಕೊಣಾಜೆ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ*ಕಿ ಒಣಹುಲ್ಲಿಗೆ ತಾಗಿ ಧಗಧಗನೇ ಹೊತ್ತಿ ಉ#ರಿದ ಹುಲ್ಲು..!
ಒಣಹುಲ್ಲಿಗೆ ಬೆಂಕಿ ತಗುಲಿ ರಾಜ್ಯ ಹೆ. ರಸ್ತೆ ಬದಿಗೆ ವ್ಯಾಪಿಸಿದ ಬೆಂ#ಕಿ; ...
ಒಣಹುಲ್ಲಿಗೆ ಬೆಂಕಿ ತಗುಲಿ ರಾಜ್ಯ ಹೆ. ರಸ್ತೆ ಬದಿಗೆ ವ್ಯಾಪಿಸಿದ ಬೆಂ#ಕಿ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ#ಕಿ ವ್ಯಾಪಿಸಿರುವ ಶಂಕೆ ವ್ಯಕ್ತ

ಕೊಣಾಜೆ ಮಂಗಳಗoಗೋತ್ರಿಯ ಕುಲಸಚಿವರ ಬಂಗಲೆ ಮುಂಭಾಗ ಘಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸದನದಲ್ಲಿ ಗಮನಸೆಳೆದ ಶಾಸಕರುಗಳ ಬ್ಯಾನರ್‌ಗಳ ವಿಚಾರ
Now Playing
ಸದನದಲ್ಲಿ ಗಮನಸೆಳೆದ ಶಾಸಕರುಗಳ ಬ್ಯಾನರ್‌ಗಳ ವಿಚಾರ
ಫ್ಲೆಕ್ಸ್, ಬ್ಯಾನರ್‌ಗಳಿಂದಾಗುವ ಅವಘಡಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ ಜಾಹೀರಾತುಗಳ ...
ಫ್ಲೆಕ್ಸ್, ಬ್ಯಾನರ್‌ಗಳಿಂದಾಗುವ ಅವಘಡಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ

ಜಾಹೀರಾತುಗಳ ಬಗ್ಗೆ ಸರಕಾರದ ನಿಲುವೇನು..?
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d