Site icon Ullalavani

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಯೋಗ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆ ಭೇಟಿ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಫೆಬ್ರವರಿ 21 ಮತ್ತು 22 ರಂದು ವಿವಿಯ ಮಂಗಳ ಸಭಾಂಗಣದಲ್ಲಿ ನಡೆಯಲಿರುವ 27 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕಸಾಪ ಜಿಲ್ಲಾ ಅಧ್ಯಕ್ಷರು ಹಾಗೂ ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಯೋಗ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇವರನ್ನು ಭೇಟಿ ಮಾಡಿದರು.
ಈ ಸಂದರ್ಭ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ| ಎಂ.ಪಿ ಶ್ರೀನಾಥ್ , ಜಿಲ್ಲಾ ಸಂಘಟನಾ ಕಾರ‍್ಯದರ್ಶಿ ಲ| ಚಂದ್ರಹಾಸ್ ಶೆಟ್ಟಿ, ಉಳ್ಳಾಲ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಧನಂಜಯ ಕುಂಬ್ಳೆ, ಗೌರವ ಕಾರ‍್ಯದರ್ಶಿ ಉಳ್ಳಾಲ ತಾಲೂಕು ಸಾಹಿತ್ಯ ಪರಿಷತ್ ಕೆ. ರವೀಂದ್ರ ರೈ, ಸದಸ್ಯರಾದ ಸುಧೀಂದ್ರ ರೈ ಉಪಸ್ಥಿತರಿದ್ದರು.

Exit mobile version