

ಕುತ್ತಾರು: ಕುತ್ತಾರು, ದೆಕ್ಕಾಡು ಶ್ರೀ ಕೊರಗಜ್ಜನ ಆದಿಸ್ಥಳಕ್ಕೆ ರಾಜ್ಯದ ಮಾಜಿ ಶಿಕ್ಷಣ ಸಚಿವರು, ರಾಜಾಜಿನಗರದ ಶಾಸಕರಾದ ಸುರೇಶ್ ಕುಮಾರ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ಕ್ಷೇತ್ರದ ಆಡಳಿತ ಸಮಿತಿಯವರು ಮತ್ತು ಬಿ.ಜೆ.ಪಿ. ಮಂಗಳೂರು ಮಂಡಲದ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು, ಜಿಲ್ಲಾ ಕಾರ್ಯಾಕಾರಿಣಿ ಸದಸ್ಯರಾದ ಹರಿಯಪ್ಪ ಸಾಲ್ಯಾನ್, ಶಕ್ತಿ ಕೇಂದ್ರ ಪ್ರಮುಖರಾದ ನವೀನ್ ಅಂಬ್ಲಮೊಗರು, ಪ್ರಮುಖರಾದ ಪ್ರದೀಪ್ ಶೆಟ್ಟಿ, ದೀಕ್ಷಿತ್ ನಿಸರ್ಗ ಸ್ವಾಗತಿಸಿದರು.



