ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕೊಲ್ಯ: ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಏರಿದ ಘಟನೆ ಕೊಲ್ಯ ಸಮೀಪ ಇದೀಗ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಏಕಮುಖ ಸಂಚಾರವನ್ನು ಬಿಟ್ಟು ಕೊಡಲಾಗಿದೆ. ಈ ಮೂಲಕ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಎದುರಿನಿಂದ ಓವರ್ ಟೇಕ್ ಮಾಡುತ್ತಾ ಬರುತ್ತಿದ್ದ ವಾಹನವನ್ನು ತಪ್ಪಿಸುವ ಸಲುವಾಗಿ ಚಾಲಕ ಬಸ್ಸನ್ನು ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಅದು ನಿಯಂತ್ರಣ ಕಲೆದುಕೊಂಡು ಡಿವೈಡರ್ ಮೇಲೇರಿದೆ. ಘಟನೆಯಿಂದ ರಸ್ತೆಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ಸನ್ನು ಕ್ರೇನ್ ಮೂಲಕ ತೆರವುಗೊಳಿಸುವ ಮೂಲಕ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.








