ಉಳ್ಳಾಲ : ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಬೈಕ್
ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ಯುವಕ ವರ್ಕಾಡಿ ಗ್ರಾಮದ ನಲೆಂಗಿ ನಿವಾಸಿ ರೋಷನ್ ಮೋರಸ್ (34) ಮೃತ ಯುವಕ.
ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ರೋಷನ್ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ತಕ್ಷಣ ಮಂಗಳೂರಿನ ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಸಿಕೊಳ್ಳದೆ ಗುರುವಾರ ಸಂಜೆ ಸಾವನ್ನಪ್ಪಿದ್ದಾರೆ.
ಮೃತ ರೋಷನ್ ರವರು ಆಂಡ್ರಿ ಡಿಸೋಜ ಹಾಗೂ ಲಿಲ್ಲಿ ಅವರ ಎರಡನೇ ಪುತ್ರ. ರೋಷನ್ ಅವರಿಗೆ ಮದುವೆ ಆಗಿ ಕೇವಲ ನಾಲ್ಕು ವರ್ಷಗಳಾಗಿದ್ದು ಐದು ತಿಂಗಳ ಹೆಣ್ಣು ಮಗುವಿದೆ.
ಪತ್ನಿಯನ್ನು, ಮಗು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತಿಮ ಕಾರ್ಯಕ್ರಮ ಶುಕ್ರವಾರ ನಡೆಯಲಿದೆ.
ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


