ತೊಕ್ಕೊಟ್ಟು : ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಕನಸು ಈಗ ಸಾಕಾರಗೊಳ್ಳುತ್ತಿರುವುದಕ್ಕೆ ಹೆಮ್ಮೆಪಡುವ ಕ್ಷಣ. ಈ ವರ್ಷಗಳಿಂದಲೂ ನಿರಂತರವಾಗಿ ಪ್ರತಿಧ್ವನಿಸುತ್ತಿದ್ದ ಬೇಡಿಕೆಯಾದ ಸರಕಾರಿ ಮೆಡಿಕಲ್ ಕಾಲೇಜನ್ನು ಪುತ್ತೂರು ತಾಲೂಕಿಗೆ ಮಂಜೂರು ಮಾಡಿಸಿರುವ ಅಹಿಂದ ಪರ ನಾಯಕರು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯರವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಅಹಿಂದ ದಕ್ಷಿಣ ಕನ್ನಡ ಜಿಲ್ಲಾಅಧ್ಯಕ್ಷ ಬಾದ್ ಷಾ ಸಾಂಬಾರತೋಟ ಸಲ್ಲಿಸಿದ್ದಾರೆ..

ದಕ್ಷಿಣ ಕನ್ನಡ ಅಹಿಂದ ಸಂಘಟನೆ, ಜಿಲ್ಲೆಯ ಜನತೆಗೆ ಉತ್ತಮ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ, ದಕ್ಷಿಣ ಕನ್ನಡದಲ್ಲಿ ಸರಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಅಗತ್ಯವನ್ನು ಹಲವು ಹಂತಗಳಲ್ಲಿ ಸರ್ಕಾರದ ಗಮನಕ್ಕೆ ತಂದಿತ್ತು. ಸಂಘಟನೆಯ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಈ ಸಂಬಂಧ ಅನೇಕ ಬಾರಿ ಮನವಿಯನ್ನು ಸಲ್ಲಿಸಿತ್ತು.
ಇದು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ದೊಡ್ಡ ಆಶಾಕಿರಣ. ಈ ಮೆಡಿಕಲ್ ಕಾಲೇಜು ಕೇವಲ ಶಿಕ್ಷಣ ಕ್ಷೇತ್ರಕ್ಕೆ ಮಾತ್ರವಲ್ಲ, ಜಿಲ್ಲೆಯ ಆರ್ಥಿಕ, ಸಾಮಾಜಿಕ ಮತ್ತು ಆರೋಗ್ಯ ವ್ಯವಸ್ಥೆಗಳ ಅಭಿವೃದ್ಧಿಗೆ ಪೂರಕವಾಗಲಿದೆ. ಮಾನ್ಯ ಸಿದ್ದರಾಮಯ್ಯರವರ ಮುಂದಾಳುತ್ವದಲ್ಲಿ ಈ ಮಹತ್ವದ ಯೋಜನೆ ಕಾರ್ಯಗತವಾಗುತ್ತಿರುವುದು ಜಿಲ್ಲೆಯ ಪ್ರಗತಿಗೆ ಹೊಸ ದಾರಿ ತೆರೆದಿದೆ.
ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಹಾಗೂ ಸರ್ಕಾರದ ಎಲ್ಲ ಪದಾಧಿಕಾರಿಗಳಿಗೆ ಮತ್ತೊಮ್ಮೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

