
ಉಳ್ಳಾಲ: ಸರೋಶ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಶನ್ (ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಸರ್ವಿಸಸ್) ವಿದ್ಯಾರ್ಥಿಗಳು 2024ರ ಜುಲೈನಲ್ಲಿ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯದ ಬಿಎಚ್‌ಎಂ ಪದವಿಯ ಅಂತಿಮ ಪರೀಕ್ಷೆಯಲ್ಲಿ ಮೊದಲ ಮೂರು ಶ್ರೇಯಾಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ದೇವ ಎಲ್ವಿನ್ ಪಿಂಟೋ ಸರಾಸರಿ 89.02% ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದಿದ್ದರೆ, ಗ್ರೇಶಲ್ ಇನೆಶ್ ರಾಡ್ರಿಗಸ್ 86..83% ಪಡೆದು ಎರಡನೆಯ ಸ್ಥಾನ ಪಡೆದಿದ್ದಾರೆ. ಶ್ರೇಯಾ ಜುವಿಟ ಲೋಬೊ 80.94% ಅಂಕಗಳನ್ನು ಪಡೆದು ಮೂರನೆಯ ಸ್ಥಾನದಲ್ಲಿದ್ದಾರೆ.