Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೋಟೆಕಾರು

ಮಾಡೂರು ಸರಕಾರಿ ಶಾಲೆಗೆ ಆಂಗ್ಲಮಾಧ್ಯಮ ಶಿಕ್ಷಣಕ್ಕೆ ಸ್ಪೀಕರ್ ಅಸ್ತು ತನ್ನ ಒಂದು ತಿಂಗಳ ವೇತನವನ್ನು ಶಾಲೆ ಅಭಿವೃದ್ಧಿಗೆ ನೀಡಿದ ವಿಧಾನಸಭಾಧ್ಯಕ್ಷ

UllalaVaniBy UllalaVaniApril 1, 2025Updated:April 1, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಮಾಡೂರಿನ ಜನತೆಯ ಬಹುಬೇಡಿಕೆಯ ಸರಕಾರಿ ಶಾಲೆಯನ್ನು ಆಂಗ್ಲಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸುವ ಯೋಜನೆಗೆ ಶಾಸಕರು ಹಾಗೂ ವಿಧಾನಸಭಾ ಅಧ್ಯಕ್ಷರು ಯು.ಟಿ.ಖಾದರ್ ಗ್ರೀನ್ ಸಿಗ್ನಲ್ ನೀಡಿದ್ದು, ಸರಕಾರದಿಂದ ಅನುದಾನ ಬರುವವರೆಗೆ ತನ್ನ ವೇತನದಿಂದ ರೂ.1 ಲಕ್ಷ ವನ್ನು ಆಂಗ್ಲಮಾಧ್ಯಮ ಶಾಲೆಯ ಕಾರ‍್ಯಾಚರಣೆಗೆ ನೀಡುವುದಾಗಿ ಭರವಸೆ ನೀಡಿದ್ದಾರೆ.


ಸರಕಾರಿ ಶಾಲೆ ಉನ್ನತೀಕರಣದ ಪ್ರಸ್ತಾವ ಕೇಳಿಬಂದ ಹಿನ್ನೆಲೆಯಲ್ಲಿ ಮಾಡೂರು ಶಾಲೆಯಲ್ಲಿ , ಅಭಿವೃದ್ಧಿ ಸಮಿತಿಯೊಂದಿಗೆ ಎರಡನೇ ಬಾರಿ ಸಭೆ ನಡೆಸಿದ ಅವರು ಶಿಕ್ಷಣಾಧಿಕಾರಿಗಳಿಗೆ ಆಂಗ್ಲ ಮಾಧ್ಯಮ ಶಾಲೆಯನ್ನು ಆರಂಭಿಸುವಂತೆ ಸೂಚಿಸಿದ್ದಾರೆ. ಪೂರಕ ದಾಖಲೆಗಳೆಲ್ಲವನ್ನು ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಸಿದ್ಧಪಡಿಸುವುದಾಗಿ ತಿಳಿಸಿದ ಅವರು
ಎಲ್ ಕೆ.ಜಿ ಯುಕೆಜಿ ಒಂದನೇ ತರಗತಿಗೆ ದಾಖಲಾತಿಗಳನ್ನು ಆರಂಭಿಸುವಂತೆ ತಿಳಿಸಿದ್ದಾರೆ. ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಕರ್ತವ್ಯ, ವಿದ್ಯಾರ್ಥಿಗಳ ಸಂಖ್ಯೆಯನ್ನು ಸಮಿತಿ, ಶಿಕ್ಷಕ ವೃಂದದೊಂದಿಗೆ ಸೇರಿಕೊಂಡು ನಡೆಸಬೇಕು. ಎಲ್ ಕೆ.ಜಿ , ಯುಕೆಜಿಯಲ್ಲಿ ಒಟ್ಟು 15 ವಿದ್ಯಾರ್ಥಿಗಳು ಕಡ್ಡಾಯವಾಗಿ ಇರಲೇಬೇಕು ಎಂದು ಸೂಚಿಸಿದರು. ಕಮಿಟಿ ರಚಿಸಿ ಶಿಕ್ಷಕರಿಗೆ ಎಷ್ಟು ವೇತನ ಜೋಡಿಸಬಹುದು ಅನ್ನುವ ಚರ್ಚೆ ನಡೆಸಬೇಕಿದೆ. ವಿದ್ಯಾರ್ಥಿಗಳಿಗೆ ಶುಲ್ಕ ಎಷ್ಟು ಹಾಕಬಹುದು ಅನ್ನುವ ಲೆಕ್ಕಚಾರ ಮಾಡಬೇಕು. ಮಾದರಿ ಶಾಲೆಯನ್ನಾಗಿ ರಚಿಸಬೇಕಿದೆ. ಕೊಠಡಿಗಳನ್ನು ಕಡಿಮೆ ಖರ್ಚಿನಲ್ಲಿ ಆಕರ್ಷಕ ವಾಗಿ ಪೇಟಿಂಗ್ ಮಾಡಬೇಕು. ಎಲ್ಲರೂ ತಂಡವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿರಿ. ಇದರಿಂದ ಯಶಸ್ಸು ಖಂಡಿತ. ಒಂದನೇ ತರಗತಿ ಆರಂಭಿಸಲು ಕೆಲವೊಂದು ಸಮಸ್ಯೆ ಗಳಿವೆ ಆದರೆ ಅದರ ಬಗ್ಗೆ ನಾನು ಶಿಕ್ಷಣ ಸಚಿವರ ಜೊತೆ ಹಾಗೂ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ.ಕಮಿಟಿ ಹಾಗೂ ಊರಿನವರು ಸೇರಿಸಿ ದಾನಿಗಳಿಂದ ಹಣ ಸಂಗ್ರಹಿಸಿ ಒಂದು ವರ್ಷದ ಬಜೆಟ್ ನಡೆಸಿ ಎಲ್ಲಾ ಖರ್ಚುವೆಚ್ಚಗಳ ಪಟ್ಟಿಯನ್ನು ಮಾಡಬೇಕು. ಶಿಕ್ಷಕರ ನೇಮಕಾತಿಯಲ್ಲೂ ಯಾವುದೇ ಲಾಭಿ ಮಾಡದಿರಿ. ಚಟುವಟಿಕೆಯಿಂದ ಕೂಡಿದ ಶಿಕ್ಷಕರಿಗೆ ಮೊದಲ ಆದ್ಯತೆಯನ್ನು ನೀಡಿ ಎಲ್ ಕೆ.ಜಿ. ಯು.ಕೆಜಿ , ಒಂದನೇ ತರಗತಿಗೆ ಶಿಕ್ಷಕರು ಹಾಗೂ ಒಂದು ಆಯಾ ಬೇಕಿದೆ ಎಂದರು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೊಳಿಯಾರ್‌, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಅಬ್ದುಲ್ ಅಜೀಝ್ ಮಾಡೂರು, ಕಾಂಗ್ರೆಸ್ ಕೋಟೆಕಾರು ಸಮಿತಿ ಅಧ್ಯಕ್ಷ ಸುಕುಮಾರ್ ಗಟ್ಟಿ, ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷೆ ಸುರೇಖ ಚಂದ್ರಹಾಸ್, ಚಂದ್ರಿಕಾ ರೈ, ಕೌನ್ಸಿಲಾರಾದ‌ ಸುಜೀತ್ ಮಾಡೂರು, ಬಶೀರ್, ಅಹಮ್ಮದ್ ಭಾವ, ಇಶಾಕ್ , ಮೊಹಮ್ಮದ್ ದೇರಳಕಟ್ಟೆ , ಮಾಜಿ ಕೌನ್ಸಿಲರಾದ ಹಮೀದ್ ಹಸನ್, ನಾಮ‌ ನಿದೇರ್ಶಿತ ಸದಸ್ಯರಾದ ಸಫಿಯಾ, ಗಫೂರು ಮಾಡೂರು , ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಈಶ್ವರ್ ,ಕ್ಷೇತ್ರ ಸಮನ್ವಯ ಅಧಿಕಾರಿ ಸುಶ್ಮಾ ವಿ ಕಿಣಿ, ಶಿಕ್ಷಣ ಸಂಯೋಜಕಿ ಅನ್ನಪೂರ್ಣ ಬುಚ್ಚಾನ್‌ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d