Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಜೂ. 1ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025 ರಾಷ್ಟ್ರೀಯ ಕಲಾ ಸಮ್ಮೇಳನ, ಕ್ರಿಕೆಟಿಗ ರೋಹಿತ್‌ ಶರ್ಮಾ, ಉಪಮುಖ್ಯಮಂತ್ರಿ ಡಿಕೆಶಿವಕುಮಾರ್‌ ಕಾರ್ಯಕ್ರಮದಲ್ಲಿ ಭಾಗಿ

UllalaVaniBy UllalaVaniMay 26, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಜೂ. 1 ರಂದು ಭಾನುವಾರ ಅಡ್ಯಾರ್ ಗಾರ್ಡನ್ ಯಕ್ಷಧ್ರುವ ಪಟ್ಲ ಸಂಭ್ರಮ -೨೦೨೫ ರಾಷ್ಟ್ರೀಯ ಕಲಾ ಸಮ್ಮೇಳನ ನಡೆಯಲಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ಹೇಳಿದ್ದಾರೆ.
ಬೆಳಿಗ್ಗೆ 9.30 ರಿಂದ ರಾತ್ರಿ 11 ರ ವರೆಗೆ ಸಮ್ಮೇಳನ ನಡೆಯಲಿದ್ದು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು ಆಶೀರ್ವವಚನ ನೀಡಲಿದ್ದಾರೆ. ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಶಶಿ ಕೇಟರರ್ಸ್ ಹೊಟೇಲ್ ಕಾಶಿ ಪ್ಯಾಲೇಸ್ ನ ಮಾಲಕ, ಉದ್ಯಮಿ ಶಶಿಧರ ಬಿ ಶೆಟ್ಟಿ ವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವರವರ ಉಪಸ್ಥಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ರಾಷ್ಟ್ರೀಯ ಕಲಾ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಡಾ. ಮೋಹನ್ ಆಳ್ವರವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಭಾರತದ 8 ಶಾಸ್ತ್ರೀಯ ಕಲೆಗಳ ಪ್ರದರ್ಶನ, ಯಕ್ಷಗಾನ ಹಾಗೂ ಭಾರತೀಯ ಕಲೆಗಳ ಛಾಯಾಚಿತ ಪ್ರದರ್ಶನ ನಡೆಯಲಿದೆ.
ಮಧ್ಯಾಹ್ನ 1 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಆಶೀರ್ವಚನ ಮಾಡಲಿದ್ದಾರೆ. ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ ಕೆ ಪ್ರಕಾಶ್ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭಕ್ಕೆ ಖ್ಯಾತ ಕ್ರಿಕೆಟ್ ಆಟಗಾರ ರೋಹಿತ್ ಶರ್ಮಾ ತಾರಾ ಮೆರುಗು ನೀಡಲಿದ್ದಾರೆ.
ಸಂಜೆ 5.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಉಸ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಮುಂಬೈ ಹೇರಂಭ ಇಂಡಸ್ಟ್ರೀಸ್ ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಸಭಾಧ್ಯಕ್ಷತೆ ನಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು 2025 ರ ಯಕ್ಷಧ್ರುವ ಕಲಾ ಗೌರವ ನೀಡಿ ಗೌರವಿಸಲಾಗುವುದು. 2025 ರ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಶೆಟ್ಟಿ ದಂಪತಿಗಳಿಗೆ ನೀಡಿ ಗೌರವಿಸಲಾಗುವುದು. 2025 ರ ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತ, ವಿದ್ವಾಂಸ ಕುರಿಯ ಗಣಪತಿ ಶಾಸ್ತ್ರಿಯವರಿಗೆ ನೀಡಿ ಸನ್ಮಾನಿಸಲಾಗುವುದು. ರಾಷ್ಟ್ರೀಯ ಕಲಾ ಸಮ್ಮೇಳನದಲ್ಲಿ ಎಂಟು ತಂಡಗಳಿಂದ ತೆಂಕು ಮತ್ತು ಬಡಗು ತಿಟ್ಟಿನ ಯುವ ಕಲಾವಿದರಿಂದ ಯಕ್ಷಗಾನ ಸ್ಪರ್ಧೆ ನಡೆಯಲಿದೆ.
15 ಕೋಟಿ ರೂ ಮೊತ್ತದ ಸೇವಾ ಯೋಜನೆ
ಕಳೆದ 10 ವರ್ಷಗಳಲ್ಲಿ 15 ಕೋಟಿ ರೂ ಮೊತ್ತದ ಸೇವಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ದಶಮ ಸಂಭ್ರಮ 2025ರ ಸೇವಾ ಯೋಜನೆಗಳು ಈ ರೀತಿಯಾಗಿದೆ
ಪಟ್ಲ ಪ್ರಶಸ್ತಿ – “1 ಲಕ್ಷ ಗೌರವಧನದೊಂದಿಗೆ, ಯಕ್ಷಗಾನ ಸಹಿತ ವಿವಿಧ ಕ್ಷೇತ್ರಗಳ ಹಿರಿಯ 16 ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ – ತಲಾ ರೂ.20,000 ನಗದಿನೊಂದಿಗೆ
ವೈದ್ಯಕೀಯ ಆರ್ಥಿಕ ನೆರವು, ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ಕನ್ನಡಕ ಹಾಗೂ ಔಷಧ ವಿತರಣೆ, ಅಶಕ್ತ ಕಲಾವಿದರಿಗೆ ಗೃಹ ನಿರ್ಮಾಣಕ್ಕೆ ಸಹಾಯಧನ
, 86 ಸರಕಾರಿ ಪ್ರಾಥಮಿಕ ಶಾಲೆಗಳ 9500 ವಿದ್ಯಾರ್ಥಿಗಳಿಗೆ – ಯಕ್ಷಶಿಕ್ಷಣ ಯೋಜನೆ ನೀಡಲಾಗುವುದು.

ಅಪಘಾತ ವಿಮಾ ಯೋಜನೆ (ಯಕ್ಷಗಾನ, ನಾಟಕ ರಂಗಭೂಮಿ, ಕಂಬಳ ಮತ್ತು ದೈವಾರಾಧನೆ)
ಸುಮಾರು 3,500 ಕಲಾವಿದರಿಗೆ ಹೆಸರು ನೋಂದಾಯಿಸುವ ಕಲಾವಿದರು ಒಂದೊಂದು ಪ್ರತಿ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ನೊಂದಿಗೆ ಹಾಜರಿರಬೇಕು. ಈ ವಿಮಾ ಯೋಜನೆಯ ನೊಂದಾವಣೆ ಪಟ್ಲ ಸಂಭ್ರಮದಂದು (ಜೂ. 1, ಆದಿತ್ಯವಾರ) ಬೆಳಿಗ್ಗೆ ಗಂಟೆ 8 ರಿಂದ ಸಂಜೆ 5 ರ ತನಕ ಒಂದೇ ದಿನ ಮಾತ್ರ ಇರುವುದರಿಂದ ಈ ಅವಕಾಶವನ್ನು ಸದುಪಯೋಗಪಡಿಸಿ ಕೊಳ್ಳಬೇಕಾಗಿ ವಿನಂತಿಸಲಾಗಿದೆ. ಬೇರೆ ದಿನಗಳಲ್ಲಿ ನೋಂದಾವಣೆಗೆ ಅವಕಾಶವಿರುವುದಿಲ್ಲ.

ಕನಸಿನ ಯೋಜನೆ
ನಿವೇಶನ ರಹಿತ 100 ಮಂದಿ ಕಲಾವಿದರಿಗೆ ಉಚಿತ 100 ಮನೆಗಳ ನಿರ್ಮಾಣ “ಪಟ್ಲ ಯಕ್ಷಾಶ್ರಯ ಯೋಜನೆಯಾಗಿದೆ.

ಯಕ್ಷಧ್ರುವ ಯಕ್ಷಶಿಕ್ಷಣ
ಯಕ್ಷಗಾನ ಲೋಕದಲ್ಲಿ ಹೊಸ ಯಕ್ಷಗಾನ ಕಲಾವಿದರನ್ನು, ಕಲಾಸಕ್ತರನ್ನು ಸುಸಂಸ್ಕೃತ ಪ್ರೇಕ್ಷಕರನ್ನು ಹುಟ್ಟುಹಾಕುವ ಒಂದು ಪ್ರಗತಿಯುತ ಹೆಜ್ಜೆಯೇ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆ. ಹಿರಿಯ ಕಲಾವಿದರ ಮಾರ್ಗದರ್ಶನದ ಮೇರೆಗೆ ಪ್ರಸ್ತುತ ಕಾಲಘಟ್ಟದ ಒಟ್ಟು 48 ಯಕ್ಷಗಾನ ಶಿಕ್ಷಕರು ರಾಜ್ಯದ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಯಕ್ಷಶಿಕ್ಷಣದ ತರಗತಿ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 87 ಶಾಲೆಗಳ ಸುಮಾರು 6500 ವಿದ್ಯಾರ್ಥಿಗಳು ಯಕ್ಷಗಾನ ಶಿಕ್ಷಣವನ್ನು ಪಡೆಯುತ್ತಿರುವುದು ಮಾತ್ರವಲ್ಲದೆ ಅದರಲ್ಲಿ ಸುಮಾರು 4000 ವಿದ್ಯಾರ್ಥಿಗಳ ಯಕ್ಷಗಾನ ರಂಗಪ್ರವೇಶವೂ ಈಗಾಗಲೇ ನಡೆದಿದೆ. ಈ ಯೋಜನೆಯು ಮುಖ್ಯವಾಗಿ ಸರಕಾರಿ ಶಾಲಾ ಮಕ್ಕಳ ಅಭ್ಯುದಯವನ್ನೇ ಕೇಂದ್ರವನ್ನಾಗಿರಿಸಿಕೊಂಡಿದೆ. ಶಿಕ್ಷಣ ಇಲಾಖೆಯ ಅನುಮತಿಯೊಂದಿಗೆ ಶಾಲಾ ಅವಧಿಯಲ್ಲಿ ಶಾಲಾ ಶಿಕ್ಷಣದ ಅಂಗವಾಗಿ ಯಕ್ಷ ಶಿಕ್ಷಣದ ತರಗತಿಗಳು ನಡೆಯುತ್ತಿದ್ದು ಯಕ್ಷಗಾನ ಕಲೆಯ ಮೂಲಕ ಸಂಸ್ಕೃತಿ ಮತ್ತು ಭಾಷೆಯ ಉಳಿವು- ಬೆಳವಣಿಗೆಯತ್ತ ಈ ಯೋಜನೆ ಮುಖ ಮಾಡಿದೆ. ಯಕ್ಷಗಾನ ಕಲೆಯ ಅಭ್ಯಾಸದಿಂದಾಗಿ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಾಭಿವೃದ್ಧಿಯ ಜೊತೆಗೆ ಮಕ್ಕಳಲ್ಲಿ ಆತ್ಮಸ್ಥೆರ್ಯ ಉದ್ದೀಪನವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿ.ಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜತೆ ಕಾರ್ಯದರ್ಶಿಗಳಾದ ರವಿಚಂದ್ರ ಶೆಟ್ಟಿ ಅಶೋಕನಗರ, ರಾಜೀವ್ ಪೂಜಾರಿ ಕೈಕಂಬ ಮತ್ತು ಉದಯಕುಮಾ‌ರ್ ಶೆಟ್ಟಿ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೈಕ್ ಅಡ್ಡಗಟ್ಟಿ ಭೀಕರ ಹತ್ಯೆ

March 27, 2026

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಉಳ್ಳಾಲ ಪೊಲೀಸರು…!

March 26, 2026

ತಲಪಾಡಿಯಲ್ಲಿ ಇ-ಸಿಗರೇಟ್ ಕೇಸ್: ಆರೋಪಿಯನ್ನು ಬಂಧಿಸಿದ ಪೊಲೀಸರು

March 26, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
BANTWALA

ತೊಕ್ಕೊಟ್ಟು ಹತ್ಯೆ ಪ್ರಕರಣ; ದುಷ್ಕರ್ಮಿಗಳು ಬಳಸಿದ್ದ ಕಾರು ಬುಡೋಳಿಯಲ್ಲಿ ಪತ್ತೆ…!

By UllalaVaniMarch 27, 20260

ಇಂದು ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಫ್ಲೈಓವರ್‌ ಮೇಲೆ ನಡೆದ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೈಕ್ ಅಡ್ಡಗಟ್ಟಿ ಭೀಕರ ಹತ್ಯೆ

March 27, 2026

ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!

March 26, 2026

14 ವರ್ಷದ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದ ಕ್ಯಾ. ಚೌಟ ಕರೆ

March 26, 2026
1 2 3 … 1,848 Next
Automatic YouTube Gallery

Thokkottu BreakingNews |ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬೆಳ್ಳಂಬೆಳಗ್ಗೆ ರ#ಕ್ತದೋಕು##ಳಿ...!

ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಅಟ್ಟಹಾಸ ಮೆರೆದ ದುಷ್ಕರ್ಮಿಗಳು ;ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹ#*ತ್ಯೆ

ಹ#ತ್ಯೆಗೆ ನಿಖರ ಕಾರಣ..?!!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Thokkottu BreakingNews |ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬೆಳ್ಳಂಬೆಳಗ್ಗೆ ರ#ಕ್ತದೋಕು##ಳಿ...!
Now Playing
Thokkottu BreakingNews |ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬೆಳ್ಳಂಬೆಳಗ್ಗೆ ರ#ಕ್ತದೋಕು##ಳಿ...!
ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಅಟ್ಟಹಾಸ ಮೆರೆದ ದುಷ್ಕರ್ಮಿಗಳು ;ಕಿನ್ಯ ಅಜ್ಜಿನಡ್ಕ ...
ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಅಟ್ಟಹಾಸ ಮೆರೆದ ದುಷ್ಕರ್ಮಿಗಳು ;ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹ#*ತ್ಯೆ

ಹ#ತ್ಯೆಗೆ ನಿಖರ ಕಾರಣ..?!!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಾಳಿಕೆ-ಬೋಳ್ನಾಡುಗುತ್ತು ಕುಟುಂಬದ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ ಏ.5ರಿಂದ ಆರಂಭ
Now Playing
ಬಾಳಿಕೆ-ಬೋಳ್ನಾಡುಗುತ್ತು ಕುಟುಂಬದ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ ಏ.5ರಿಂದ ಆರಂಭ
ಶ್ರೀ ಅರಸು ಮಂಜಿಷ್ಣಾರ್ ದೈವಗಳ ಪ್ರತಿಷ್ಠೆ, ಕಲಶಾಭಿಷೇಕಕ್ಕೆ ಭವ್ಯ ಸಿದ್ಧತೆ; ...
ಶ್ರೀ ಅರಸು ಮಂಜಿಷ್ಣಾರ್ ದೈವಗಳ ಪ್ರತಿಷ್ಠೆ, ಕಲಶಾಭಿಷೇಕಕ್ಕೆ ಭವ್ಯ ಸಿದ್ಧತೆ; ಏ.5ರಿಂದ 10ರವರೆಗೆ ಧಾರ್ಮಿಕ ವೈಭವ: ಬೋಳ್ನಾಡುಗುತ್ತು ಕ್ಷೇತ್ರದಲ್ಲಿ ಮಹೋತ್ಸವ

ಕ್ಷೇತ್ರದಲ್ಲಿ ಕುಟುಂಬಸ್ಥರಾದ ನಳಿನಾಕ್ಷ ಶೆಟ್ಟಿ ಮಾಹಿತಿ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d