ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಳೆದ ಹಲವಾರು ವರ್ಷಗಳಿಂದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಸಿಬ್ಬಂದಿಗಳಾದ ಶಿವಾನಂದ ಪೂಜಾರಿ ಹಾಗೂ ಸೀತಾ ಅವರನ್ನು ಮಂಗಳೂರು ವಿವಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಪತಿಗಳಾದ ಪ್ರೊ.ಪಿ.ಎಲ್.ಧರ್ಮ, ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ, ಪರೀಕ್ಷಾಂಗ ಕುಲಸಚಿವರಾದ ಪ್ರೊ.ದೇವೇಂದ್ರಪ್ಪ ಹಾಗೂ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕೇತರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು ವಿವಿ : ನಿವೃತ್ತ ಸಿಬ್ಬಂದಿಗೆ ಬೀಳ್ಕೊಡುಗೆ
