ಮಂಗಳೂರು : ಬಿಜೆಪಿಯ ರಾಜ್ಯ ಮುಖಂಡರು ದ.ಕ.ಜಿಲ್ಲೆಯ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಆರೋಪಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕರು, ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ ಹಲವು ಮುಖಂಡರು ಸೋಮವಾರ ದ.ಕ.ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ದಾಟಿಯಲ್ಲಿ ಮಾತನಾಡಿದ್ದಾರೆ.
ಕಾನೂನು ಪ್ರಕಾರ ಕಾರ್ಯಾಚರಿಸಲು ಪೊಲೀಸರಿಗೆ ಅವಕಾಶ ಕಲ್ಪಿಸುವ ಬದಲು ಬೆದರಿಕೆ ದಾಟಿಯಲ್ಲಿ ಮಾತನಾಡಿರವುದು ಸರಿಯಲ್ಲ ರಾಜ್ಯದಲ್ಲಿ ಸರಕಾರ ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ ಪೊಲೀಸ್ ಇಲಾಖೆ ಅವರ ಕೆಲಸ ಮಾಡುತ್ತಾರೆ. ತಮಗೆ ಬೇಕಾದ ಹಾಗೆ ಮಾಡಿಲ್ಲ ಅಂತ ಬಿಜೆಪಿಗರು ತಕರಾರು ತೆಗೆಯುವುದರಲ್ಲಿ ಅರ್ಥವಿಲ್ಲ ಎಂದರು.


