Site icon Ullalavani

ಕಾಂತಾರಕ್ಕೆ ಮತ್ತೊಂದು ಅಘಾತ… ಕಲಾವಿದ ಹೃದಯಾಘಾತದಿಂದ ಸಾವು!

ತೀರ್ಥಹಳ್ಳಿ: ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ

Exit mobile version