ಗುಜರಾತ್ನಲ್ಲಿ ಅಹಮದಾಬಾದ್ ಏರ್ಪೋರ್ಟ್ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಈ ವಿಮಾನದಲ್ಲಿ ಸಿಬ್ಬಂದಿ ಸೇರಿ 133 ಮಂದಿ ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ. ಗುಜರಾತ್ನ ಮೇಘನಿ ನಗರದ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು , ಅಲ್ಲಿಗೆ ತೆರಳುವ ಎಲ್ಲ ರಸ್ತೆಗಳನ್ನು ಮುಚ್ಚಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ವಿಮಾನ ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿತ್ತು. ವಿಮಾನ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


