Site icon Ullalavani

ಜೂ.15 ರಂದು ಉಳ್ಳಾಲ ನಗರಸಭೆ ಸಮುದಾಯ ಭವನದಲ್ಲಿಉಚಿತ ವೈದ್ಯಕೀಯ, ಕಣ್ಣಿನ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ


ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಪಡೀಲ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ ಮತ್ತು ಮಹಿಳಾ ವಿಭಾಗ ಬಂಡಿಕೊಟ್ಯ ಮತ್ತು ವಿದ್ಯಾರಣ್ಯ ಯುವಕ ವೃಂದ ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಶಿವಶಕ್ತಿ ಯುವಕ ಮಂಡಲ ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ಕಣ್ಣಿನ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರವನ್ನು ಜೂ. 15 ಆದಿತ್ಯವಾರ ಪೂರ್ವಾಹ್ನ 9.30 ರಿಂದ ಮದ್ಯಾಹ್ನ 12.30ರ ವರೆಗೆ ಉಳ್ಳಾಲ ನಗರಸಭೆ ಆವರಣದಲ್ಲಿರುವ ಸಮುದಾಯ ಭವನ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಇವರ ನುರಿತ ವೈದ್ಯರ ತಂಡದಿAದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತç ಚಿಕಿತ್ಸೆ, ಮಧುಮೇಹ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳಿಗೆ ಸಿಮೆಂಟ್ ತುಂಬಿಸುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಉಚಿತ ಔಷಧಿ ವಿತರಣೆ, ಇನ್ನಿತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Exit mobile version