

ಶಿವಮೊಗ್ಗ : ಕಾಂತಾರ ಸಿನಿಮಾದ ಶೂಟಿಂಗ್ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ವರಾಹಿ ಹಿನ್ನಿರಿನ ಪ್ರದೇಶದಲ್ಲಿ ನಡೆಯುತ್ತಿದ್ದ ಶೂಟಿಂಗ್ ವೇಳೆ ದೋಣಿ ಮಗುಚಿದ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪದ ಮಾಣಿ ಜಲಾಶಯದ ವರಾಹಿ ಹಿನ್ನೀರು ಪ್ರದೇಶದಲ್ಲಿ ನಿನ್ನೆ ಶೂಟಿಂಗ್ ನಡೆಯುತ್ತಿತ್ತು. ಮೇಲಿನ ಕೊಪ್ಪ ಎಂಬ ಮುಳುಗಡೆ ಗ್ರಾಮದ ಬಳಿ ಕಾಂತರಾ ಚಾಪ್ಟರ್ ಅಂಡ್ ಶೂಟಿಂಗ್ ನಡೆಯುತ್ತಿದ್ದ ಸಂದರ್ಭ ನಾಯಕ ನಟ ರಿಷಬ್ ಶೆಟ್ಟಿ ಇತರರು ಇದ್ದ ದೋಣಿ ನೀರಿಗೆ ಮಗುಚಿಬಿದ್ದಿದೆ. ಈ ಸಂದರ್ಭ ಕ್ಯಾಮರಕ್ಕೆ ಹಾನಿಯುಂಟಾಗಿದೆ. ಆದರೆ ನಟ ರಿಷಬ್ ಶೆಟ್ಟಿ ಹಾಗೂ ಇತರರು ಈಜಿ ದಡ ಸೇರಿದ್ದಾರೆ.
ಮುಳುಗಡೆ ಗ್ರಾಮ ವಾದ ಹಿನ್ನೆಲೆಯಲ್ಲಿ ಹೆಚ್ಚಿನ ನೀರು ಇರಲಿಲ್ಲ . ಯಾವುದೇ ಪ್ರಾಣಪಯವಿಲ್ಲದೆ ಎಲ್ಲರೂ ಪಾರಾಗಿದ್ದಾರೆ. ಘಟನೆಯ ನಂತರ ಚಿತ್ರೀಕರಣ ಮುಗಿಸಿ ಯಡೂರು ಸಮೀಪದ ರೆಸಾರ್ಟ್ ಒಂದರಲ್ಲಿ ಚಿತ್ರತಂಡ ತಂಗಿದೆ.