
ಯೋಗದಲ್ಲಿ ಧ್ಯಾನವು ಪ್ರಮುಖ ಪಾತ್ರ ವಹಿಸುತ್ತದೆ ಧ್ಯಾನವು ಮನಸ್ಸನ್ನು ಶಾಂತಗೊಳಿಸಿ , ಮಾನಸಿಕ ಒತ್ತಡವನ್ನು ಕಡಿಮೆಗೊಳಿಸಿ, ಏಕಾಗ್ರತೆ ಹೆಚ್ಚಿಸುವ ಕೆಲಸವನ್ನು ಮಾಡುತ್ತದೆ ಹಾಗಾಗಿ ಶಾಲಾ ವಿದ್ಯಾರ್ಥಿಗಳಿಗೆ ಯೋಗದಿಂದ ಹೆಚ್ಚಿನ ಲಾಭ ಸಿಗುತ್ತದೆ.
ಯೋಗವಾಗಲಿ, ಧ್ಯಾನವಾಗಲಿ ಆಸನಗಳ ಅಭ್ಯಾಸವಾಗಲಿ ಅವುಗಳನ್ನು ನಿರಂತರವಾಗಿ ಮಾಡುವುದರಿಂದ ಮಾತ್ರ ಯೋಗದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗವಿಜ್ಞಾನ ವಿಭಾಗದ ಉಪನ್ಯಾಸಕರಾದ ತಿರುಮಲೇಶ್ವರ ಪ್ರಸಾದ ಇವರು ಅಭಿಪ್ರಾಯಪಟ್ಟರು. ಇವರು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆ ಮತ್ತು ಮಾನವ ಪ್ರಜ್ಞೆ ಹಾಗು ಯೋಗವಿಜ್ಞಾನ ವಿಭಾಗ ಹಾಗೂ ಧರ್ಮ ನಿಧಿ ಯೋಗಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇವುಗಳ ಸಹಯೋಗದಲ್ಲಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಯೋಗಪಟುಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳಾದ ಕುಮಾರಿ ಪ್ರಣಮ್ಯ ಮತ್ತು ಕಾರ್ತಿಕ್ ಹಾಗು ಯೋಗ ಶಿಕ್ಷಕ ಮೋಹನ್ ಇವರುಗಳು ಯೋಗ ಪ್ರದರ್ಶನವನ್ನು ಮತ್ತು ಯೋಗ ತರಬೇತಿಯನ್ನು ನಡೆಸಿಕೊಟ್ಟರು.ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಮ್ ಹರೇಕಳ ಇವರು ಯೋಗಾಸನದ ಪ್ರಯೋಜನಗಳ ಬಗ್ಗೆ ತಿಳಿಸಿ ಕೊಟ್ಟು, ಮಕ್ಕಳಿಗೆ ಪ್ರತಿಜ್ಞೆಯನ್ನು ಬೋಧಿಸಿದರು. ಶಾಲಾ ಸಂಚಾಲಕರಾದ ಕಡೆಂಜ ಸೋಮಶೇಖರ ಚೌಟ ಅಧ್ಯಕ್ಷತೆಯನ್ನು ವಹಿಸಿದ್ದರು.ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹಿನಿ ಶುಭವನ್ನು ಹಾರೈಸಿದರು. ಹಿರಿಯ ಶಿಕ್ಷಕ ರವಿಶಂಕರ್ ಸ್ವಾಗತಿಸಿದರು ಶಿಕ್ಷಕರುಗಳಾದ ಕುಮುದದೇವಿ, ಕೃಷ್ಣ ಶಾಸ್ತ್ರೀ , ಶಿವಣ್ಣ, ಸ್ಮಿತಾ ಇವರುಗಳು ಸಹಕರಿಸಿದರು.