Site icon Ullalavani

ಪೋಷಕರ – ಶಿಕ್ಷಕರ ಉತ್ತಮ ಸಂಬಂಧದಿಂದ ಶಾಲಾ ಕಾರ್ಯಕ್ಷಮತೆ ಹೆಚ್ಚಳ – ಜಯರಾಮ ಆಳ್ವ

ಪೋಷಕರು ಮತ್ತು ಶಿಕ್ಷಕರ ನಡುವಿನ ಉತ್ತಮ ಸಂಬಂಧವು ಮಗುವಿನ ಶಾಲಾ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಮಕ್ಕಳನ್ನು ಕೇವಲ ನಾಲ್ಕು ಗೋಡೆಯ ಮಧ್ಯೆ ಕಲಿಯುತ್ತಿರುವ ಪಠ್ಯಕ್ಕೆ ಸೀಮಿತ ಗೊಳಿಸದೇ, ಮಕ್ಕಳ ಉತ್ತಮ ವ್ಯಕ್ತಿತ್ವ ರೂಪುಗೊಳ್ಳ ಬೇಕಾದರೆ ಶಿಕ್ಷಕರೊಂದಿಗೆ ಪೋಷಕರು ಉತ್ತಮ ಬಾಂಧವ್ಯ ವನ್ನು ಇಟ್ಟುಕೊಳ್ಳಬೇಕು ಅದರಿಂದ ನಿಮ್ಮ ಮಕ್ಕಳು ಉತ್ತಮ ವಿದ್ಯಾರ್ಥಿಗಳಾಗಿ ಮೂಡಿ ಬರಲು ಸಾಧ್ಯ. ಎಂದು ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಪೋಡಾರು ಜಯರಾಮ ಆಳ್ವ ಅಭಿಪ್ರಾಯ ಪಟ್ಟರು.

ಇವರು ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಾವೂರು ಹರೇಕಳ ವತಿಯಿಂದ ನಡೆದ ಶಾಲಾ ಪೋಷಕರು ಸಭೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಪೋಷಕರ ಸಭೆಯ ಅಧ್ಯಕ್ಷತೆಯನ್ನು ಕಡೆಂಜ ಸೋಮಶೇಖರ ಚೌಟ ವಹಿಸಿದ್ದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 605 ಅಂಕಗಳನ್ನು ಪಡೆದ ಪ್ರಜನ್ಯ ಮತ್ತು ಡಿಸ್ಟಿಂಕ್ಷನ್ ಪಡೆದ ಲಾವಣ್ಯ, ಜಯರಾಜ, ದೀಕ್ಷಿತ, ಅನುಷಾ ಮುಂತಾದವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಹಾಗು ವಿದ್ಯಾಶ್ರೀ ಶೈಕ್ಷಣಿಕ ದತ್ತು ಯೋಜನೆಯನ್ನು ಸಂಚಾಲಕರಾದ ಕಡೆಂಜ ಸೋಮಶೇಖರ್ ಚೌಟ ಉದ್ಘಾಟಿಸಿದರು. ಮತ್ತು ಶಾಲಾ ಕ್ಯಾಲೆಂಡರ್ ನ್ನು ಬಿಡುಗಡೆ ಗೊಳಿಸಲಾಯಿತು.
ಇದೇ ಸಂದರ್ಭದಲ್ಲಿ 2025- 26 ನೇ ಸಾಲಿಗೆ ರಾಮಕೃಷ್ಣ ಪ್ರೌಢಶಾಲೆಯ ಶಿಕ್ಷಕ ರಕ್ಷಕ ಸಂಘಕ್ಕೆ ಅಧ್ಯಕ್ಷರಾಗಿ ಹರೇಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ ಮಜಿದ್ ಅವರು ಅವಿರೋಧವಾಗಿ ಆಯ್ಕೆಯಾದರು . ಉಪಾಧ್ಯಕ್ಷರಾಗಿ ವಿಶ್ವನಾಥ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಪ್ರಿಯಾಂಕ ಕೋಶಾಧಿಕಾರಿಯಾಗಿ ಶ್ರೀಮತಿ ಪ್ರಿಯ ಮುಂತಾದವರು ಆಯ್ಕೆಯಾದರು.
ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಾವೂರು ಹರೇಕಳ ಇದರ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಫರೀದ್ ನಗರ ಇವರು ಅವಿರೋಧವಾಗಿ ಆಯ್ಕೆಯಾದರು . ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಸುಜಾತ ಕೋಶಾಧಿಕಾರಿಯಾಗಿ ನಿಸಾರ್ ಅವರುಗಳು ಆಯ್ಕೆಯಾದರು.ಹಾಗು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಈ ಶೈಕ್ಷಣಿಕ ವರ್ಷದಿಂದ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಇದರ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವಾ ಹಿರಿತನದಲ್ಲಿ ಆಯ್ಕೆಯಾದ ಶ್ರೀಮತಿ ಮೋಹಿನಿ ಅವರನ್ನು ಆಡಳಿತ ಮಂಡಳಿಯ ವತಿಯಿಂದ ಹೂಗುಚ್ಚ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಹಿರಿಯರ ಶಿಕ್ಷಕರಾದ ಶ್ರೀಮತಿ ಪ್ರೇಮಲತಾ, ಶ್ರೀಮತಿ ಕುಮುದ, ರವಿಶಂಕರ್ ಮುಂತಾದವರು ಉಪಸ್ಥಿತರಿದ್ದರು, ಶಿಕ್ಷಕರಾದ ಶಿವಣ್ಣ , ಸ್ಮಿತಾ, ಉಷಾ, ನಾಗೇಂದ್ರ, ಅನಿತ, ಪ್ರಶ್ಮ ಇವರುಗಳು ಸಹಕರಿಸಿದರು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ರಾಧಾಕೃಷ್ಣ ರೈ ಅವರು ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಬಗ್ಗೆ ತಿಳಿಸಿದರು.ಶಿಕ್ಷಕರಾದ ಕೃಷ್ಣಶಾಸ್ತ್ರೀ ಸ್ವಾಗತಿಸಿದರು.ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹಿನಿ ಪ್ರಸ್ತಾವನೆಗೈದರು. ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಮ್ ಹರೇಕಳ ಕಾರ್ಯಕ್ರಮ ನಿರೂಪಿಸಿದರು.ಹಿರಿಯ ಶಿಕ್ಷಕ ರವಿಶಂಕರ್ ಪ್ರಾರ್ಥಿಸಿದರು.

Exit mobile version