Site icon Ullalavani

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ವತಿಯಿಂದ “ಆತ್ಮಶಕ್ತಿ ಸೌಧ”, ಪಡೀಲ್‌ನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಅತಿಥಿಗಳು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತದನಂತರ ಮಾತನಾಡಿದ ಸಂಘದ ಅಧ್ಯಕ್ಷರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸುವರ್ಣ ರವರು ಸಂಘದ ಸಿಬ್ಬಂದಿಗಳಿಗೆ ಯೋಗಾಸನ ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸುವರ್ಣ ರವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್. ಪಿ , ನಿರ್ದೇಶಕರಾದ ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಹಿರಿಯ ಯೋಗ ಶಿಕ್ಷಕಿಯಾದ ಶ್ರೀಮತಿ ವಿದ್ಯಾ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು

Exit mobile version