ಮಂಗಳೂರು : ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಫರೀದ್ ಉಳ್ಳಾಲ ಕಡಲ್ಗೊರೆತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಗೊರತಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದರಲ್ಲದೆ ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.






