ಕೋಟೆಕಾರು: ಇಲ್ಲಿನ ಬೀರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ರಯಾಣಿಕರನ್ನು ಹತ್ತಿಸಲು ನಿಂತ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಬಿಂಬದಿಯಲ್ಲಿ ಬರುತ್ತಿದ್ದ ಎಕ್ಸ್ ಯುವಿ ಕಾರು ಢಿಕ್ಕಿ ಹೊಡೆದ ಘಟನೆ ಸಂಜೆ ವೇಳೆ ನಡೆದಿದೆ.


ಕಾಸರಗೋಡು ಕಡೆಯತ್ತ ತೆರಳುವ ಬಸ್ ಹಾಗೂ ಅದೇ ಕಡೆಯತ್ತ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಹಾಗೂ ಬಸ್ ನ ಹಿಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಯಾರಿಗೂ ಗಾಯಗಳಾಗಿಲ್ಲ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದಾರೆ.

