Site icon Ullalavani

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕಕ್ಕೆ ಅಧ್ಯಕ್ಷರಾಗಿ ವಿವೇಕಾನಂದ ಸನಿಲ್  ಆಯ್ಕೆ , ಸ್ಪೀಕರ್ ಖಾದರ್ ಅಭಿನಂದನೆ  

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಅಧ್ಯಕ್ಷರಾಗಿ ವಿವೇಕಾನಂದ ಸನಿಲ್ ಅವರನ್ನು ಆಯ್ಕೆ ಮಾಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಆದೇಶ ಹೊರಡಿಸಿದೆ.


ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಸಮಾಜ ಸೇವೆ, ಸಂಘಟನಾ ಕಾರ್ಯಗಳಲ್ಲಿ ಸಕ್ರಿಯರಾಗಿದ್ದು, ಹಿಂದುಳಿದ ವರ್ಗದ ಜನರ ಹಕ್ಕು, ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗದ ಸಂಘಟನೆಯು ಹೆಚ್ಚು ಸಕ್ರಿಯವಾಗುವ ಹಾಗೂ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸುವ ನಿರೀಕ್ಷೆಯಿದೆ.
ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್  ಸೇರಿದಂತೆ  ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಅಭಿನಂದಿಸಿ ಶುಭ ಕೋರಿದ್ದಾರೆ. ಪಕ್ಷದ ಬಲವರ್ಧನೆ ಹಾಗೂ ಹಿಂದುಳಿದ ವರ್ಗದ ಅಭಿವೃದ್ಧಿಗೆ ಅವರ ಒಲವು ಅತ್ಯಂತ ಉಪಯುಕ್ತವಾಗಲಿದೆ ಎಂದು ಅಭಿಪ್ರಾಯಪಟ್ಟರು.

Exit mobile version