Site icon Ullalavani

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ

ಮಂಗಳೂರು : ಮೆಟ್ರಿಕ್ ನಂತರದ ಹಾಗೂ ಮೆರಿಟ್ -ಕಂ-ಮೀನ್ಸ್‌ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ(SSP)ದಲ್ಲಿ ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ 2.50 ಲಕ್ಷ ಒಳಗಿರಬೇಕು. SSP 5 https://ssp.postma- tric.karnataka.gov.in ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://dom. karnataka.gov.in SSP https:// ssp.postmatric.karnataka.gov.in : 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Exit mobile version