ಕೊಣಾಜೆ : ಯುವವಾಹಿನಿ ಗ್ರಾಮಚಾವಡಿ ಕೊಣಾಜೆ ಘಟಕದ 2025-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗ್ರಾಮಚಾವಡಿ ನಾರಾಯಣ ಗುರು ಸಮುದಾಯ ಭವನದಲ್ಲಿ ರವಿವಾರ ನಡೆಯಿತು.

ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕೊಣಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಚಾವಡಿ ಕೊಣಾಜೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಕೊಣಾಜೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಥಮ ಉಪಾಧ್ಯಕ್ಷ ವಿಜೇತ್ ಪಜೀರ್ ಸ್ವಾಗತಿಸಿದರು. ಕಾರ್ಯದರ್ಶಿ ಅಜಿತ್ ಪೂಜಾರಿ ಪಜೀರ್ ವರದಿ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭ ಮಂಜನಾಡಿ ದುರಂತ ಸಂತ್ರಸ್ತ ಕುಟುಂಬಕ್ಕೆ ಧನಸಹಾಯದ ಚೆಕ್ ಹಸ್ತಾಂತರಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕ್ರೀಡೆ ಸಾಂಸ್ಕೃತಿಕ ಹಾಗೂ ವಿವಿಧ ಕ್ಷೇತ್ರದ ಸಾಧಕರು ಸಮಾಜ ಸೇವಕರು, ನವದಂಪತಿಗಳನ್ನು ಸನ್ಮಾನಿಸಲಾಯಿತು.
ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಇದರ ಅರ್ಥೋಪೆಡಿಕ್ ವಿಭಾಗ ಮುಖ್ಯಸ್ಥ ಡಾ.ಆಶಿತ್ ಎಂ.ವಿ. ಬ್ರೈಟ್ ಗ್ಲೋಬ್ ಪ್ರೈವೇಟ್ ಲಿಮಿಟೆಡ್ ಇದರ ವ್ಯವಸ್ಥಾಪಕ ನಿರ್ದೇಶಕ ಮೋಹನ್ ರಾಜ್, ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಡಿ.ಕುಂದರ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಜೇಶ್ ವಿಟ್ಲ ಯುವವಾಹಿನಿ ಘಟಕದ ನೂತನ ಅಧ್ಯಕ್ಷ ಬಾಬು ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ಮಿಥುನ್ ಪಜೀರ್ ವಂದಿಸಿದರು. ಸುರೇಖಾ ಎಚ್.ಪೂಜಾರಿ, ಸುಜಾತ ಮತ್ತು ಅಭಿಜ್ಞಾ ಕಾರ್ಯಕ್ರಮ ನಿರೂಪಿಸಿದರು.


