
ನಾಟೆಕಲ್ : ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.15 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಪುಟ್ಟರಾಜು ತಿಳಿಸಿದ್ದಾರೆ.

