Site icon Ullalavani

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕರಂಗಲ್ಪಾಡಿ ಶಾಖೆಯ ಗ್ರಾಹಕರ ಸಭೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕರಂಗಲ್ಪಾಡಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಕರಂಗಲ್ಪಾಡಿ ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಪುಟ್ಟಸ್ವಾಮಿ ಹೆಚ್, ರಮೇಶ್ ಯು, ಶ್ರೀಧರ್ ಹಾಗೂ ಅಶೋಕ್ ಎಮ್.ಕೆ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.


ಸಂಘದ ಸದಸ್ಯರಾದ ಸುಮ ಪ್ರಸಾದ್ ರವರು ಮಾತನಾಡಿ ಶಾಖೆಯು ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ನೀಡುತ್ತಿದ್ದು, ಶಾಖೆಯ ಸಿಬ್ಬಂದಿಗಳ ನಗುಮೊಗದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಸದಸ್ಯರಾದ ರಾಜರಾಮನ್ ತಾಳಿಪಾಡಿ ರವರು ಮಾತನಾಡಿ ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೇವೆಯನ್ನು ಶೀಘ್ರವಾಗಿ ನೀಡುತ್ತಿರುವ ಹಾಗೂ ಆಯ್ದ ರಜಾ ದಿನಗಳಲ್ಲಿ ಬ್ಯಾಂಕಿಂಗ್ ಹಾಗೂ ಇ-ಸ್ಟಾಂಪಿಂಗ್ ಸೇವೆ ನೀಡುತ್ತಿರುವದರಿಂದ ಗ್ರಾಹಕರಿಗೆ ತುಂಬಾ ಅನುಕೂಲವಾಗುತ್ತಿದೆ ಎಂದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಈ “ಸಂಸ್ಥೆಯು 13 ವರ್ಷದಲ್ಲಿ 33 ಶಾಖೆಗಳನ್ನು ತೆರೆದು, 2000 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಲು ಗ್ರಾಹಕರೇ ಕಾರಣ. ಗ್ರಾಹಕರ ಸಹಕಾರದಿಂದ ನಮ್ಮ ಸಂಸ್ಥೆ ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು. ಬ್ಯಾಂಕಿಂಗ್ ಸೇವೆಯ ಜೊತೆಯಲ್ಲಿ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಸಂಘದ ವತಿಯಿಂದ 86ಕ್ಕೂ ಮಿಕ್ಕಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿದೆ. ಕರಂಗಲ್ಪಾಡಿ ಶಾಖೆಯ ಪ್ರಯಕ್ತ 1000ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 8,೦೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ಆಯ್ದ ರಜಾ ದಿನಗಳಲ್ಲಿಯೂ ಸ್ಟಾಂಪಿಂಗ್ ಸೇವೆಗಳನ್ನು ನೀಡುತ್ತಿದೆ. ಇದರ ಸದುಪಯೋಗವನ್ನು ಗ್ರಾಹಕರು ಪಡೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಜಿ ಪರಮೇಶ್ವರ ಪೂಜಾರಿ, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಮ್, ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಕರಂಗಲ್ಪಾಡಿ ಶಾಖೆಯ ಸಿಬ್ಬಂದಿಯಾದ ಟೀಷ್ಮಾ ಸ್ವಾಗತಿಸಿ , ಕುಮಾರಿ ನವ್ಯ ವಂದಿಸಿದರು. ಶಾಖಾಧಿಕಾರಿ ಕೌಶಿಕ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Exit mobile version