ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನ ಸಾನಿಧ್ಯದಲ್ಲಿ ಭಜನೆ ಸತ್ಸಂಗಗಳು ನಿರಂತರವಾಗಿ ನಡೆಯುವುದು ಒಳ್ಳೆಯ ವಿಷಯ ಇದರಿಂದ ಲೋಕಕ್ಕೆ ಕಲ್ಯಾಣವಾಗಲಿ. ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ಇಂತಹ ಕಾರ್ಯಕ್ರಮಗಳು ಎಲ್ಲೆಡೆಯೂ ನಿರಂತರವಾಗಿ ನಡೆಯಲಿ ಎಂದು ತಲಪಾಡಿ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಗಣೇಶ್ ಭಟ್ ಆಶೀರ್ವಚನ ನೀಡಿದರು.


ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಸೋಮೇಶ್ವರ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಹಾಗೂ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಭಜನೋತ್ಸವ ಕಾರ್ಯಕ್ರಮವನ್ನು ದೀಪಬೆಳಗಿಸಿ ಅವರು ಆಶೀರ್ವಚನ ನೀಡಿದರು.
ಭಜನೆ, ಸತ್ಸಂಗ ಕಾರ್ಯಕ್ರಮಗಳು ದೇವಸ್ಥಾನ, ಮಠ ಮಂದಿರಗಳಲ್ಲಿ ಯಾವಾಗಲೂ ನಡೆಯುತ್ತಿರಬೇಕು. ಹಿಂದೂ ಸಂಸ್ಕೃತಿ- ಸಂಸ್ಕಾರವನ್ನು ತಿಳಿಸುವ ಬೆಳೆಸುವ ಕಾರ್ಯಕ್ರಮಗಳು ಮಕ್ಕಳಿಗೆ ಒಳ್ಳೆಯ ಸಂಸ್ಕಾರವನ್ನು ಕೊಡಲಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಮಾಡೂರು ಶಿವಗಿರಿ ಶ್ರೀ ಶಿವ ದುರ್ಗಾಂಭ ಮಠದ ಪರಮಪೂಜ್ಯ ಶ್ರೀ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿಗಳು ಆಶೀರ್ವಚನ ನೀಡಿದರು.
ತಲಪಾಡಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕೆ, ಮಾಜಿ ಆಡಳಿತ ಮೊಕ್ತೇಸರ ಡಾ. ಮೋಹನದಸ ರೈ ಸಾಂತ್ಯಗುತ್ತು, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ ಜಿಲ್ಲಾ ಬಿಜೆಪಿ ಮುಖಂಡ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು, ಅಖಿಲ ಭಾರತ ಜನಜಾಗೃತಿ ಸಮಿತಿ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ವಿಭಾಗದ ಯೋಜನಾಧಿಕಾರಿ ಸುರೇಂದ್ರ, ಕಾಪಿಕಾಡ್ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಿರೀಶ್ ವಿ.ಕೆ ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯ , ಉದ್ಯಮಿ ಗಿರೀಶ್ ಆಳ್ವ ಕೋಟೆಕಾರ್ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಿವ್ಯಾ ಸತೀಶ್ ಶೆಟ್ಟಿ, ಮಾಜಿ ಅಧ್ಯಕ್ಷ ಶೇಖರ್ ಕನೀರ್ ತೋಟ, ಶ್ರೀ ಕ್ಷೇತ್ರ ಕೊಂಡಾಣದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರ್ಷರಾಜ್ ಮುದ್ಯ, ಶಿಕ್ಷಕಿ, ಲೇಖಕಿ ವಿಜಯಲಕ್ಷ್ಮಿ ಕಟೀಲು, ಕಾಪಿಕಾಡ್ ಶ್ರೀ ಮಂತ್ರದೇವತೆ ಸಾನಿಧ್ಯದ ಆಡಳಿತ ಮೊಕ್ತೇಸರರು ಪ್ರಶಾಂತ್ ಕಾಪಿಕಾಡ್, ವಿಶ್ವಾಸ್ ಅಡಿಟೋರಿಯಂ ಮಾಲಕರು ಗೋಪಾಲ್ ಶೆಟ್ಟಿ ಅರಿಬೈಲ್
ಸೋಮೇಶ್ವರ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ಆರ್ ಶೆಟ್ಟಿ, ನಡಾರ್ ಶ್ರೀ ಕೊರಗಜ್ಜ ಸಾನಿಧ್ಯದ ಅಧ್ಯಕ್ಷ ವಿಶ್ವನಾಥ್ ಕುಲಾಲ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ತಲಪಾಡಿ ಭಜನೋತ್ಸವ ಸಮಿತಿ ಅಧ್ಯಕ್ಷ ಸತೀಶ್ ದೀಪಂ, ಉಪಾಧ್ಯಕ್ಷೆ ಶ್ರೀಮತಿ ಆಶಾ ಗಟ್ಟಿ ನಡಾರು, ಕಾರ್ಯದರ್ಶಿ ಪ್ರಕಾಶ್ ಕಿನ್ಯ , ಕೋಶಾಧಿಕಾರಿ ಶ್ರೀಮತಿ ಪ್ರಿಯಾ ಎನ್ ಬಂಗೇರ, ಜತೆ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಎಸ್. ಗಟ್ಟಿ ಸಂಘಟನಾ ಕಾರ್ಯದರ್ಶಿಗಳು ಶ್ರೀಮತಿ ದೀಪ್ತಿ, ಶ್ರೀಮತಿ ರೇವತಿ ವಿಶ್ವನಾಥ್, ಶ್ರೀಮತಿ ಆಶಾ ಶಿವಪ್ರಸಾದ್ ಕಣ್ವತೀರ್ಥ ಶ್ರೀಮತಿ ನೋವಿತಾ ಗಟ್ಟಿ, ಪ್ರಭಾಕರ್ ಕುಂಪಲ, ಶ್ರೀನಿವಾಸ ಶೆಟ್ಟಿ, ಸತೀಶ್ ಶೆಟ್ಟಿ ದೇವಿಪುರ, ಸೋಮೇಶ್ವರ ವಲಯದ ಸೇವಾ ಪ್ರತಿನಿಧಿಗಳು ಮತ್ತು ಪ್ರಗತಿ ಬಂಧು ಸ್ವಸಹಾಯ ತಂಡಗಳ ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಂಗಳೂರು ತಾಲೂಕು ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಅಧ್ಯಕ್ಷ ಉಮೇಶ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಲಪಾಡಿ ಭಜನೋತ್ಸವ ಸಮಿತಿ ಅಧ್ಯಕ್ಷ ಸತೀಶ್ ದೀಪಂ ನೇತೃತ್ವ ವಹಿಸಿದ್ದರು.
ಸೋಮೇಶ್ವರ ವಲಯ ಮೇಲ್ವಿಚಾರಕ ಮೋಹನ್ ಕುಮಾರ್ ಸ್ವಾಗತಿಸಿದರು. ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ನಿರೂಪಿಸಿದರು.





