ವಿದ್ಯಾಭಾರತಿ ಆಯೋಜಿಸಿದ 2025-26ರ ಫುಟ್ಬಾಲ್ ಟೂರ್ನಮೆಂಟ್ ನಲ್ಲಿ ಮಂಗಳೂರಿನ ರಾಷ್ಟೋತ್ಥಾನ ವಿದ್ಯಾಕೇಂದ್ರದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

17 ವರ್ಷದೊಳಗಿನ ಪುಟ್‌ಬಾಲ್ ಪಂದ್ಯಾಟದಲ್ಲಿ ಆರಂಭದಿಂದಲೂ ರಾಷ್ಟೋತ್ಥಾನದ ವಿದ್ಯಾರ್ಥಿನಿಯರು ಉತ್ತಮ ಸಾಧನೆ ತೋರಿದ್ದರು. ಉತ್ತಮವಾಗಿ ಆಡುವ ಮೂಲಕ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾ ಕೇಂದ್ರದ ಬಾಲಕಿಯರ ತಂಡದ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ.



