ಉಳ್ಳಾಲ : ನಿರಂತರವಾಗಿ ಮಳೆಯಾಗುತ್ತಿರುವುದರಿಂದ, ಇಂದು ಶನಿವಾರ ಜು.19ರಂದು ಉಳ್ಳಾಲ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉಳ್ಳಾಲ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜು.19ರಂದು ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಣೆ
